ಜಿಲ್ಲಾಡಳಿತದಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ

ನಿರ್ಭೀತಿಯಿಂದ ಮತ ಚಲಾಯಿಸಿ, ನಿಮ್ಮಿಷ್ಟದ ವ್ಯಕ್ತಿ ಸರ್ಕಾರ ರಚಿಸಿ
ಗದಗ: ಅರ್ಹ ಮತದಾರರೆಲ್ಲರೂ ಮತದಾನದ ದಿನದಂದು ತಪ್ಪದೆ ಮತಗಟ್ಟೆಗೆ ತೆರಳಿ ನಿರ್ಭೀತಿಯಿಂದ ಮತ ಚಲಾಯಿಸಿ ನಿಮ್ಮಿಷ್ಟದ ವ್ಯಕ್ತಿ ಅಥವಾ ಸರ್ಕಾರ ರಚಿಸಲು ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಶನಿವಾರ ಉಧ್ಘಾಟಿಸಿ ಅವರು ಮಾತನಾಡಿದರು.
ಚುನಾವಣೆಯ ಮತದಾನದ ದಿನದಂದು ಮತ ಹಾಕದಿರಲು ವಿನಾಕಾರಣ ಕುಂಟುನೆಪ ಹೇಳದೆ ಮತದಾನ ಮಾಡಬೇಕು. ಮತದಾನದ ದಿನದಂದು ಮತ ಚಲಾವಣೆಗಾಗಿಯೇ ಅವಕಾಶ ಮಾಡಿಕೊಡಲಾಗುತ್ತದೆ. ಅದನ್ನು ಚಲಾಯಿಸಿ ತಮ್ಮಿಷ್ಟದ ವ್ಯಕ್ತಿಗಳ ಆಯ್ಕೆ ಮಾಡುವ ಹಕ್ಕನ್ನು ಮತದಾನದ ಮೂಲಕ ಮಾಡುವಂತೆ ತಿಳಿಸಿದರು. ಮತದಾನದ ದಿನದಂದು ಮತ ಚಲಾಯಿಸದೆ ಪಿಕ್ನಿಕ್ ಹೋಗುವುದು ಮತದಾನ ಬಹಿಷ್ಕಾರ ಮಾಡುವುದು ಸರಿಯಾದ ಕ್ರಮ ಅಲ್ಲ. ಸರ್ಕಾರ ನಮಗೆ ನೀಡಿದ ಮತದಾನದ ಹಕ್ಕನ್ನು ಅರ್ಹರಿಗೆ ಚಲಾಯಿಸೋಣ ಎಂದರು.
ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬದಲ್ಲಿ ನಾವೆಲ್ಲರೂ ಹುರುಪಿನಿಂದ ಪಾಲ್ಗೊಂಡು ಮತ ಚಲಾಯಿಸಿ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣದೊಂದಿಗೆ ಬಲಿಷ್ಠ ಭಾರತ ನಿರ್ಮಿಸೋಣ. ಯುವಜನರು ನಮ್ಮಿಷ್ಟದ ಸರ್ಕಾರ ರಚನೆಯಲ್ಲಿ ಮತದಾನದ ಮೂಲಕ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಮತದಾನದ ಚೀಟಿ ಹೊಂದಿರುವವರು ಮತದಾನದ ಮಹತ್ವದ ಬಗ್ಗೆ ಜಾಗೃತರಾಗಬೇಕು ಮತ್ತು ಹೊಸದಾಗಿ 18 ವರ್ಷ ತುಂಬಿದವರು ತಮ್ಮ ಮತದಾರರ ಪಟ್ಟಿಯನ್ನು ನೋಂದಾಯಿಸಬೇಕು. ಭಾರತ ಚುನಾವಣಾ ಆಯೋಗದ ಸಂಸ್ಥಾಪನಾ ದಿನವಾದ ಜನವರಿ 25 ರಂದು 2011 ರಿಂದ ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನಾಗಿ ಆಚರಿಸುತ್ತಾ ಬಂದಿದೆ. ರಾಷ್ಟ್ರವನ್ನು ಮುನ್ನಡೆಸಲು ಮತ್ತು ಜನರ ಸಮಸ್ಯೆಗೆ ಸ್ಪಂದಿಸುವ ನಾಯಕರನ್ನು ಚುನಾಯಿಸಿ ನಮಗೆ ಬೇಕಾದ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಮತದಾನವು ಭದ್ರಬುನಾದಿಯಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಬಸವರಾಜ ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಅಧ್ಯಕ್ಷತೆ ವಹಿಸಿ, ಮತದಾನದ ಪ್ರತಿಜ್ಞಾ ವಿಧಿ ಭೋದಿಸಿ‌ ಮಾತನಾಡಿ, ಮತದಾರರಿಗೆ ತಮ್ಮ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರೇರಣೆ ನೀಡಲಿ ಎಂಬ ಸದುದ್ದೇಶದಿಂದ ದಿನಾಚರಣೆ ಜಾರಿಗೊಳಿಸಲಾಯಿತು. ಸಮಾಜದಲ್ಲಿನ ಸರ್ವರಿಗೂ ಸಮಬಾಳು ಸಮಪಾಲು ಲಭ್ಯವಾಗಬೇಕು. ಅರ್ಹರನ್ನು ಆಯ್ಕೆ ಮಾಡುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮತ ಚಲಾಯಿಸಬೇಕು. ಅದು ನಮ್ಮ ಕರ್ತವ್ಯ ಎಂದು ಎಲ್ಲರೂ ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರ ನಡೆಸುವವರನ್ನು ಆಯ್ಕೆ ಮಾಡುವ ಅಧಿಕಾರ ಮತದಾನದ ಮೂಲಕ ಸರ್ಕಾರ ನಮಗೆ ನೀಡಿದೆ. ಅದನ್ನು ವಿವೇಚನೆಯಿಂದ ನೀಡಬೇಕು. ಮೊದಲು ನಾನು ಸರಿ ಇರಬೇಕು ಆಗ ಎಲ್ಲರೂ ಸರಿ ಹೋಗುತ್ತಾರೆ. ಅದೇ ತರ ಮೊದಲು ನಾವು ಮತದಾನ ಮಾಡಬೇಕು, ಉತ್ತಮ ಸರ್ಕಾರ ರಚನೆಯಲ್ಲಿ ನಾವು ಪಾಲ್ಗೊಳ್ಳೊಣ ಎಂದು ಡಿಸಿ ಸಿ.ಎನ್.ಶ್ರೀಧರ ನುಡಿದರು.
ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎಸ್.ಜಿ. ಪಲ್ಲೇದ ಮಾತನಾಡಿ, ಯುವಜನತೆ ತಮ್ಮ ಜ್ಞಾನ ಭಂಡಾರ, ಅನುಭವವನ್ನು ಮತ್ತು ರಾಷ್ಟ್ರಾಭಿಮಾನವನ್ನು ಬೆಳೆಸಿಕೊಂಡು ಮತದಾನ ಮಾಡುವುದರ ಮೂಲಕ ದೇಶವನ್ನು ಸುಭದ್ರಗೊಳಿಸಬೇಕು. ಮತದಾನದ ವೇಳೆಯಲ್ಲಿ ಯಾವ ಅಭ್ಯರ್ಥಿಯು ಸೂಕ್ತವಲ್ಲ ಎನಿಸಿದರೆ  ನೋಟಾ ಒತ್ತುವುದರ ಮೂಲಕ ಮತಚಲಾಯಿಸಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಚುನಾವಣಾ ಕಾರ್ಯ ನಿರ್ವಹಿಸಿದ ಐ.ಎಲ್.ಒ.ಗಳಿಗೆ ಸನ್ಮಾನಿಸಲಾಯಿತು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸ್ವೀಪ್ ಸಮಿತಿಯು ಏರ್ಪಡಿಸಿದ ಪ್ರಬಂದ, ಬಿತ್ತಿಚಿತ್ರ ಸ್ಪರ್ಧೆಯಲ್ಲಿ ವಿಜೇತರಾದ ಬಹುಮಾನವನ್ನು ವಿತರಿಸಲಾಯಿತು. ಯುವ ಮತದಾರರಿಗೆ ಸಂಕೇತಿಕವಾಗಿ ಮತದಾರರ ಚೀಟಿ ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ ಎಸ್ ಶಿವನಗೌಡ,  ಜಿ.ಪಂ ಉಪಕಾರ್ಯದರ್ಶಿ ಸಿ ಆರ್. ಮುಂಡರಗಿ ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ ಮುದುಕಮ್ಮನವರ ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಗಂಗಪ್ಪ ಎಂ ಅವರು ವಂದಿಸಿದರು. ಪ್ರಾಚಾರ್ಯ ಬಸವರಾಜ ಗಿರಿತಿಮ್ಮಣ್ಣನವರ ಕಾರ್ಯಕ್ರಮ ನಿರ್ವಹಿಸಿದರು.
TAGGED:
Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…