More

    ಜಿಮ್ಸನಲ್ಲಿ ಸಿಟಿ ಸ್ಕ್ಯಾನ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್ ವಿತರಿಸಿದ ಸಚಿವ ಎಚ್.ಕೆ.ಪಾಟೀಲ

    ಗದಗ: ಗದಗ ವೈದ್ಯಕೀಯ ವಿದ್ಯಾಲಯ ಸಂಸ್ಥೆ ಆವರಣದಲ್ಲಿ ನೂತನ ಸಿಟಿ ಸ್ಕ್ಯಾನ್ ಹಾಗೂ ವಿದ್ಯಾರ್ಥಿಗಳಿಗೆ ನೂತನ ಬಸ್ ಚಾಲನೆ ಮತ್ತು ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್ ಗಳನ್ನು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ವಿತರಿಸಿದರು.

    ನಂತರ ಮಾತನಾಡಿದ ಅವರು ಜಿಮ್ಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ಸಕ್ರಿಯಾವಗಿ ತೊಡಗಿಸಿಕೊಳ್ಳಬೇಕು. ಜಿಮ್ಸ್ ನಲ್ಲಿ ಉತ್ತಮ ಶಿಕ್ಷಣ ಲಭ್ಯವಿದ್ದು ವಿದ್ಯಾರ್ಥಿಗಳು ಹಚ್ಚು ಅಂಕ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದರು.

    ಗದಗ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲು ಸರ್ಕಾರ ಸದಾ ಸಿದ್ಧ. ಆಸ್ಪತ್ರೆಗಳಲ್ಲಿ ಆಗಮಿಸುವ ಜನಸಾಮಾನ್ಯರಿಗೆ ಉತ್ತಮ ಚಿಕಿತ್ಸೆ ನೀಡುವುದು ಇಲ್ಲಿನ ಅಧಿಕಾರಿ ನೌಕರರ ಆದ್ಯ ಕರ್ತವ್ಯವಾಗಬೇಕೆಂದು  ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಹೇಳಿದರು.

    ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ, ಮಾಜಿ ಶಾಸಕ ಡಿ.ಆರ್.ಪಾಟೀಲ, ಗಣ್ಯರಾದ ಗುರಣ್ಣ ಬಳಗಾನೂರ, ಪ್ರಭು ಬುರಬುರೆ, ಎಸ್ ಎನ್.ಬಳ್ಳಾರಿ, ಡಾ. ನಾಗನೂರ, ಗದಗ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಿ.ಸಿ.ಕರಿಗೌಡರ ಸೇರಿದಂತೆ  ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts