More

    ಜಿ.ಪಂ. ಸಿಇಒ ಭರತ್ ಎಸ್ ಅವರಿಂದ ನರೇಗಾ ಕಾಮಗಾರಿ ಸ್ಥಳ ಪರಿಶೀಲನೆ

    ಗದಗ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ ಎಸ್ ಅವರು   ಅಡವಿಸೋಮಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನರೇಗಾ ಯೋಜನೆಯಡಿಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ನರೇಗಾ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ರೈತರಿಗೆ ಮತ್ತು ಬಡವರಿಗೆ ಅನುಕೂಲವಾಗಿದೆ.  ಎಲ್ಲರೂ ಇದರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು  ಎಂದು ಹೇಳಿದರು. ಇದೇ  ಸಂದರ್ಭದಲ್ಲಿ ಗಂಡು-ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಲಾಗುವದು.    

    ಪ್ರತಿ ಕುಟುಂಬಕ್ಕೆ ಒಂದು ವರ್ಷದಲ್ಲಿ 100 ದಿನಗಳ ಉದ್ಯೋಗ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಬೇರೆ ರಾಜ್ಯ, ಜಿಲ್ಲೆ ಹಾಗೂ ನಗರಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಎಲ್ಲರೂ ತಮ್ಮ  ಸ್ವಂತ ಊರಿನಲ್ಲಿ0iÉುೀ ಇದ್ದು ಉದ್ಯೋಗ ಮಾಡಿ ಕೂಲಿ ಪಡೆಯಬಹುದು ಎಂದು ಸಲಹೆ ನೀಡಿದರು.

    ಈ ವೇಳೆ ಗದಗ ತಾಪಂ ಸಹಾಯಕ ನಿರ್ದೇಶಕ (ಗ್ರಾ.ಉ), ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯತ ನರೇಗಾ ಸಿಬ್ಬಂದಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts