ಛತ್ತೀಸ್​ಗಢ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿಗೆ ಗೆಲುವು ಖಚಿತ: ನಿತಿನ್​ ಗಡ್ಕರಿ

ನವದೆಹಲಿ: ಭಾರತೀಯ ಜನತಾ ಪಕ್ಷ ಛತ್ತೀಸ್​ಗಢ, ಮಧ್ಯ ಪ್ರದೇಶ ಮತ್ತು ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಕೇಂದ್ರ ಸಚಿವ ನಿತಿನ್​ ಗಡ್ಕರಿ ಭರವಸೆ ವ್ಯಕ್ತಪಡಿಸಿದ್ದಾರೆ.

ಛತ್ತೀಸ್​ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನಕ್ಕೆ ನಾನು ಪ್ರವಾಸ ಕೈಗೊಂಡಿದ್ದೆ. ಈ ಮೂರು ರಾಜ್ಯಗಳಲ್ಲಿ ಬಹುಮತದಿಂದ ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡುವುದರ ಬಗ್ಗೆ ನನಗೆ ಭರವಸೆ ಇದೆ ಎಂದಿದ್ದಾರೆ.

ಡಿಸೆಂಬರ್​ 7 ರಂದು ತೆಲಂಗಾಣ ಮತ್ತು ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್​ನಲ್ಲಿ ಛತ್ತೀಸ್​ಗಢ, ಮಧ್ಯಪ್ರದೇಶ ಮತ್ತು ಮಿಜೋರಾಂ ಚುನಾವಣೆಗಳು ನಡೆದಿದ್ದವು. ಪಂಚರಾಜ್ಯ ಚುನಾವಣೆ ಫಲಿತಾಂಶ ಡಿ.11ರಂದು ಹೊರಬೀಳಲಿದೆ. (ಏಜೆನ್ಸೀಸ್)