More

    ಜ್ಞಾನವಿಕಾಸದಿಂದ ಆತ್ಮವಿಶ್ವಾಸ ಇಮ್ಮಡಿ

    ಸೊರಬ: ಮಹಿಳೆಯರ ಸಂಘಟನೆ ಬಲಗೊಳ್ಳುವದರ ಜತೆಗೆ ಆತ್ಮವಿಶ್ವಾಸ ಮತ್ತು ಜ್ಞಾನ ಬೆಳೆಯಲು ಜ್ಞಾನವಿಕಾಸ ಕೇಂದ್ರ ಸಹಕಾರಿಯಾಗಿದೆ ಎಂದು ಯೋಜನಾಧಿಕಾರಿ ಸುಬ್ರಾಯ ನಾಯ್ಕ ಹೇಳಿದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನ ಹೊಸಬಾಳೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಓಂ ಶಕ್ತಿ ಜ್ಞಾನವಿಕಾಸ ಕೇಂದ್ರದ ಪ್ರಥಮ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಜ್ಞಾನವಿಕಾಸ ಕೇಂದ್ರದಿಂದ ಸದಸ್ಯರಿಗೆ ಪ್ರತಿ ತಿಂಗಳು ಆರೋಗ್ಯ, ಶಿಕ್ಷಣ, ಕಾನೂನು ಅರಿವು, ಮಕ್ಕಳ ಪಾಲನೆ, ಸಂಸ್ಕೃತಿ ಮತ್ತು ಸಂಸ್ಕಾರ, ಕುಟುಂಬ ನಿರ್ವಹಣೆ, ಸ್ವ-ಉದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕೊಡಿಸಲಾಗುತ್ತಿದೆ ಎಂದರು.
    ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಹಗ್ಗ-ಜಗ್ಗಾಟ, ಗೋಣಿ ಚೀಲ ಓಟ ಮತ್ತು ಮಡಕೆ ಒಡೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
    ಒಕ್ಕೂಟದ ಅಧ್ಯಕ್ಷೆ ಜಾನಕಿ, ಮೇಲ್ವಿಚಾರಕ ಸುಲೇಮಾನ್, ಸಮನ್ವಯಾಧಿಕಾರಿ ಶೋಭಾ, ಸುಧಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts