More

    ಜ್ಞಾನಾರ್ಜನೆಗೆ ಕಠಿಣ ಪರಿಶ್ರಮ ಅಗತ್ಯ

    ಹಾಸನ: ಶಿಸ್ತು, ಶ್ರದ್ಧೆ ಹಾಗೂ ಕಠಿಣ ಪರಿಶ್ರಮದಿಂದ ಶಿಕ್ಷಣ ಪಡೆದಾಗ ಜ್ಞಾನಾರ್ಜನೆ ಸಾಧ್ಯ ಎಂದು ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ ಹೇಳಿದರು.


    ಹಿರೀಸಾವೆ ಹೋಬಳಿಯ ಉಳ್ಳಾವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ 2ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    ವಿದ್ಯೆ ಎಂಬುದು ಹಣ ನೀಡಿ ಪಡೆಯುವ ವಸ್ತುವಲ್ಲ. ಶ್ರದ್ಧೆ ಮತ್ತು ಶಿಸ್ತಿನಿಂದ ಬರುವುದು. ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ಬಿಸಿಯೂಟ, ಕ್ಷೀರಭಾಗ್ಯ, ಸಮವಸ್ತ್ರ ಸೇರಿದಂತೆ ಹತ್ತಾರು ಉಚಿತ ಯೋಜನೆಗಳನ್ನು ರೂಪಿಸಿದೆ. ಆದರೆ, ಆಂಗ್ಲ ಮಾಧ್ಯಮದ ಮೋಹದಲ್ಲಿ ಸಿಲುಕಿರುವ ಪಾಲಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇದರ ಪರಿಣಾಮ ಸರ್ಕಾರಿ ಶಾಲೆಗಳು ಮೂಲೆ ಗುಂಪಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

    ಇದೇ ವೇಳೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸವಿತಾ, ಸದಸ್ಯ ಉಮೇಶ್, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಹಿರೀಸಾವೆ ಹೋಬಳಿ ಘಟಕದ ಅಧ್ಯಕ್ಷ ಆರ್.ಶ್ರೀನಿವಾಸ್ ಉಳ್ಳಾವಳ್ಳಿ, ಕಾರ್ಯದರ್ಶಿ ಕೆ.ಶ್ರೀನಿವಾಸ್, ಸಿಆರ್‌ಪಿ ಧರ್ಮಪಾಲ್, ಮುಖ್ಯಶಿಕ್ಷಕ ಕುಮಾರ್, ಸಹಶಿಕ್ಷಕಿ ಶ್ರೀದೇವಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts