Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಮುಂದುವರಿದ ಟ್ಯಾಂಕರ್ ಮಾಲೀಕರ ಧರಣಿ

Thursday, 14.06.2018, 3:30 AM       No Comments

ಗಜೇಂದ್ರಗಡ: ನೀರಿನ ಟ್ಯಾಂಕರ್ ಬಾಡಿಗೆ ಹಣ ನೀಡಲು ಒತ್ತಾಯಿಸಿ ಟ್ಯಾಂಕರ್ ಮಾಲೀಕರು ಹಾಗೂ ಚಾಲಕರು ಪಟ್ಟಣದ ಪುರಸಭೆ ಆವರಣದಲ್ಲಿ ಮಂಗಳವಾರ ಬೆಳಗ್ಗೆಯಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಬುಧವಾರ ಎರಡನೇ ದಿನ ಪೂರೈಸಿತು.

ಪಟ್ಟಣದಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಜಿಲ್ಲಾಡಳಿತದ ಸೂಚನೆ ಮೇರೆಗೆ ಸ್ಥಳೀಯ ಪುರಸಭೆ ಅಧಿಕಾರಿಗಳು 10 ಖಾಸಗಿ ಟ್ಯಾಂಕರ್​ಗಳ ಮೂಲಕ ಪಟ್ಟಣದ ಪ್ರತಿಯೊಂದು ಬಡವಾಣೆಗಳಿಗೆ ನೀರು ಪೂರೈಕೆ ವ್ಯವಸ್ಥೆ ಮಾಡಿದ್ದರು. ಕಳೆದ 8 ತಿಂಗಳಿಗೂ ಅಧಿಕ ದಿನಗಳಿಂದ ಸಾರ್ವಜನಿಕರಿಗೆ ನೀರು ಪೂರೈಸಲಾಗುತ್ತಿದೆ. ಇತ್ತೀಚೆಗೆ ಪುರಸಭೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಿಗೆ ಟ್ಯಾಂಕರ್ ಮಾಲೀಕರು ಬಾಡಿಗೆ ಹಣ ಪಾವತಿಸುವಂತೆ ಮನವಿ ಮಾಡಿದ್ದರು. ಆದರೆ, ಅವರು ಪುರಸಭೆ ಮುಖ್ಯಾಧಿಕಾರಿಯವರನ್ನೇ ಕೇಳಿರಿ. ಬಾಡಿಗೆ ಹಣವನ್ನು ಜಿಲ್ಲಾಡಳಿತದಿಂದ ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಟ್ಯಾಂಕರ್ ಮಾಲೀಕರು ಆರೋಪಿಸಿದ್ದಾರೆ.

ಪಟ್ಟಣದಲ್ಲಿ ಪುರಸಭೆಯಿಂದ ನೀರು ಪೂರೈಸಲು ಬಳಸಿದ ಪ್ರತಿಯೊಂದು ಟ್ಯಾಂಕರ್​ಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಿಕೊಳ್ಳಿ. ಇಲ್ಲದಿದ್ದರೆ ಟ್ಯಾಂಕರ್ ಬಾಡಿಗೆ ಪಡೆಯಲು ಸಾಧ್ಯವಿಲ್ಲ ಎಂದು ಸೂಚಿಸಿದ್ದ ಜಿಲ್ಲಾಡಳಿತವೇ ಇಂದು ಬಾಡಿಗೆ ಹಣ ಪಾವತಿಸಲು ಸಾಧ್ಯವಿಲ್ಲ ಎನ್ನುತ್ತಿರುವುದು ಟ್ಯಾಂಕರ್ ಮಾಲೀಕರು ಹಾಗೂ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಪುರಸಭೆ ಮುಖ್ಯಾಧಿಕಾರಿ ಸೂಚನೆ ಮೇರೆಗೆ ಪಟ್ಟಣದಲ್ಲಿ ನೀರು ಸರಬರಾಜು ಮಾಡಿದ್ದೇವೆ. ಪೆಟ್ರೋಲ್ ಬಂಕ್ ಹಾಗೂ ತೋಟದ ಮಾಲೀಕರ ಬಳಿ ಲಕ್ಷಾಂತರ ರೂ. ಸಾಲ ಮಾಡಿದ್ದೇವೆ. ಆದ್ದರಿಂದ ನಮಗೆ ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಅವರು ಟ್ಯಾಂಕರ್ ಬಾಡಿಗೆ ಹಣ ನೀಡಬೇಕು. ಇಲ್ಲದಿದ್ದರೆ ಅಧಿಕಾರಿಗಳೇ ನಮಗೆ ವಿಷ ತಂದು ಕೊಡಲಿ ಎಂದು ಟ್ಯಾಂಕರ್ ಮಾಲೀಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಣ ನೀಡುವವರೆಗೂ ಪ್ರತಿಭಟನೆ ಕೈ ಬಿಡುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳು ಸ್ಪಂದಿಸದಿದ್ದರೆ ನಾಳೆಯಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಟ್ಯಾಂಕರ್ ಮಾಲೀಕರು ಎಚ್ಚರಿಸಿದ್ದಾರೆ. ಸತ್ಯಾಗ್ರಹ ಸ್ಥಳಕ್ಕೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಬಂದು ಪ್ರತಿಭಟನಾಕರರ ಆರೋಗ್ಯ ತಪಾಸಿಸಿದರು.

ಬಸವರಾಜ ಬಂಕದ, ಭೀಮಣ್ಣ ತಳವಾರ, ಶರಣಪ್ಪ ಚಳಗೇರಿ, ಭಗವಂತಗೌಡ ಪಾಟೀಲ, ಹುಸೇನಸಾಬ ನಿಶಾನದಾರ, ಹನಮಂತ ರಾಮಜಿ, ಪರಶುರಾಮ ಚಿಟಗಿ, ವೆಂಕಟೇಶ ಬಂಕದ, ರಾಜಶೇಖರ ಹೊಟ್ಟಿನ, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Back To Top