More

    ಯುರೋಪ್ ಬದಲು ಕಜಕಿಸ್ತಾನದಲ್ಲಿ ಹಾರಲಿದೆ ಗಾಳಿಪಟ

    ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ನಿಂತಿದ್ದ ‘ಗಾಳಿಪಟ 2’ ಚಿತ್ರದ ಶೂಟಿಂಗ್​ಗೆ ಇದೀಗ ಮತ್ತೆ ಸಿದ್ಧತೆ ನಡೆಯುತ್ತಿದೆ. ಈ ಹಿಂದೆಯೇ ಯೂರೋಪ್​ನಲ್ಲಿ ಚಿತ್ರೀಕರಣ ಮಾಡುವುದಕ್ಕೆ ಚಿತ್ರತಂಡ ಪ್ಲಾನ್ ಮಾಡಿಕೊಂಡಿತ್ತು. ಆದರೆ, ಲಾಕ್​ಡೌನ್​ನಿಂದಾಗಿ ಯೂರೋಪ್​ಗೆ ಚಿತ್ರೀಕರಣಕ್ಕೆಂದು ಹೋಗುವುದಕ್ಕೆ ಸಾಧ್ಯವಾಗಲಿಲ್ಲ. ಈಗಲೂ ಅನುಮತಿ ಸಿಗುವುದು ಕಷ್ಟವಿರುವುದರಿಂದ, ಯೂರೋಪ್ ಬದಲು ಕಜಕಿಸ್ತಾನ್​ನಲ್ಲಿ ಚಿತ್ರೀಕರಣ ಮಾಡಲು ಪ್ಲಾನ್ ಮಾಡಲಾಗಿದೆ. ಅದರಂತೆ ಇದೀಗ ಫೆಬ್ರವರಿ ತಿಂಗಳ ಕೊನೆಯಲ್ಲಿ ಚಿತ್ರತಂಡ ಕಜಕಿಸ್ತಾನ್​ಕ್ಕೆ ತೆರಳಲಿದೆ.

    ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ದಿಗಂತ್, ‘ಲೂಸಿಯಾ’ ಪವನ್ ಕುಮಾರ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲಾರ್ಧದ ಶೂಟಿಂಗ್ ಮುಗಿಸಿಕೊಂಡಿರುವ ನಿರ್ದೇಶಕರು, ಇದೀಗ ಕಜಕಿಸ್ತಾನದಲ್ಲಿ ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ಆ ಕಡೆಗೆ ಮುಖ ಮಾಡಿದ್ದಾರೆ. ಇನ್ನು, ಈಗಾಗಲೇ ಚಿತ್ರೀಕರಣ ಮುಗಿಸಿಕೊಂಡ ಒಂದಷ್ಟು ಭಾಗದ ಚಿತ್ರೀಕರಣೋತ್ತರ ಕೆಲಸಗಳೂ ಶುರುವಾಗಿದ್ದು, ಕೆಲ ಕಲಾವಿದರು ತಮ್ಮ ಪಾಲಿನ ಡಬ್ಬಿಂಗ್ ಸಹ ಮುಗಿಸಿದ್ದಾರೆ. ಈ ಚಿತ್ರಕ್ಕೆ ರಮೇಶ್ ರೆಡ್ಡಿ ಬಂಡವಾಳ ಹೂಡುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts