ಕೆಂಪು ಬಾಳೆಹಣ್ಣು ಸೇವಿಸುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆಯಾ? Red banana

ಪೌಷ್ಟಿಕಾಂಶಗಳನ್ನು ನೀಡುತ್ತದೆ
ಪೌಷ್ಟಿಕಾಂಶಗಳನ್ನು ನೀಡುತ್ತದೆ
Published on
Red banana

ಪೌಷ್ಟಿಕಾಂಶಗಳನ್ನು ನೀಡುತ್ತದೆ

ಕೆಂಪು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಈ ಹಣ್ಣು ನಮಗೆ ಶಕ್ತಿಯನ್ನು ನೀಡುವುದಲ್ಲದೇ, ಸಿಹಿ ಹಂಬಲವನ್ನು ಪೂರೈಸುತ್ತದೆ.
Red banana

ಜೀವಕೋಶಗಳ ರಕ್ಷಣೆ

ಕೆಂಪು ಬಾಳೆಹಣ್ಣುಗಳಲ್ಲಿ ಕ್ಯಾರೊಟಿನಾಯ್ಡ್‌ಗಳು, ವಿಟಮಿನ್ ಸಿ ಮತ್ತು ಆಂಥೋಸಯಾನಿನ್‌ಗಳಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇವು ನಮ್ಮ ದೇಹದ ಜೀವಕೋಶಗಳಿಗೆ ಹಾನಿಯಾಗದಂತೆ ನೋಡಿಕೊಳ್ಳುತ್ತವೆ.
Red banana

ಕಣ್ಣಿನ ಆರೋಗ್ಯಕ್ಕೆ ಉತ್ತಮ

ಈ ಬಾಳೆಹಣ್ಣಿನಲ್ಲಿ ವಿಟಮಿನ್ ಎ ಮತ್ತು ಕ್ಯಾರೊಟಿನಾಯ್ಡ್‌ಗಳು ಸಮೃದ್ಧವಾಗಿದ್ದು, ಇದು ಕಣ್ಣಿನ ಆರೋಗ್ಯವನ್ನು ರಕ್ಷಿಸುತ್ತದೆ. ಹಾಗೆಯೇ ಇದು ವಯಸ್ಸಿಗೆ ಸಂಬಂಧಿಸಿದ ಕಣ್ಣಿನ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.
Red banana

ಜೀರ್ಣಕ್ರಿಯೆ ಸುಧಾರಣೆ

ಕೆಂಪು ಬಾಳೆಹಣ್ಣಿನಲ್ಲಿ ನಾರಿನಂಶ ಹೇರಳವಾಗಿದ್ದು, ಇದು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ನಾರಿನಂಶವು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಿ, ಕರುಳಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.
Red banana

ಹೃದಯಾಘಾತದ ಅಪಾಯವನ್ನು ತಪ್ಪಿಸುತ್ತದೆ

ಕೆಂಪು ಬಾಳೆಹಣ್ಣುಗಳಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ಗಳಲ್ಲಿ ಸಮೃದ್ಧವಾಗಿದ್ದು, ಇದು ಸೋಡಿಯಂನ ಹಾನಿಕಾರಕ ಪರಿಣಾಮಗಳನ್ನು ಪ್ರತಿರೋಧಿಸುತ್ತದೆ. ಹಾಗೆಯೇ ಹೃದಯಾಘಾತ, ಪಾರ್ಶ್ವವಾಯುನಂತಹ ಕಾಯಿಲೆಯಿಂದ ರಕ್ಷಿಸುತ್ತದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net