ಪೋಷಕಾಂಶಗಳ ಕಣಜವಾಗಿರುವ ಕ್ಯಾರೆಟ್ ಅನ್ನು ನಿಯಮಿತವಾಗಿ ತಿನ್ನುವುದರಿಂದ ಏನೆಲ್ಲ ಆರೋಗ್ಯ ಲಾಭಗಳಿವೆ ಅನ್ನೋದನ್ನು ನಾವೀಗ ತಿಳಿದುಕೊಳ್ಳೋಣ.
ಕಣ್ಣಿನ ಆರೋಗ್ಯಕ್ಕೆ ಅತ್ಯುತ್ತಮ
ಕ್ಯಾರೆಟ್‌ನಲ್ಲಿ ಬೀಟಾ ಕ್ಯಾರೋಟೀನ್ ಜಾಸ್ತಿ ಇದ್ದು, ಇದು ದೇಹದಲ್ಲಿ ವಿಟಮಿನ್ A ಆಗಿ ಪರಿವರ್ತನೆಯಾಗುತ್ತದೆ. ಇದು ರಾತ್ರಿ ಕುರುಡುತನ, ಕಣ್ಣು ಒಣಗುವುದು ಮತ್ತು ವಯಸ್ಸಾದಂತೆ ಕಣ್ಣಿನ ಸಮಸ್ಯೆಗಳನ್ನು ತಡೆಯುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
ವಿಟಮಿನ್ ಎ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ದೇಹದ ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸಿ, ಸೋಂಕುಗಳಿಂದ ರಕ್ಷಣೆ ನೀಡುತ್ತವೆ.
ಚರ್ಮಕ್ಕೆ ಒಳ್ಳೆಯದು
ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಸಿ ಸೂರ್ಯನ ಕಿರಣಗಳಿಂದಾಗುವ ಹಾನಿ, ಮೊಡವೆ, ಚರ್ಮದ ಒಣಗುವಿಕೆ ಮತ್ತು ಮುಂಚಿನ ಸುಕ್ಕುಗಳನ್ನು ತಡೆಯುತ್ತವೆ ಮತ್ತು ಚರ್ಮ ಹೊಳೆಯುತ್ತದೆ.
ಹೃದಯದ ಆರೋಗ್ಯ
ಪೊಟ್ಯಾಶಿಯಂ, ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ರಕ್ತದೊತ್ತಡವನ್ನು ನಿಯಂತ್ರಿಸಿ, ಕೆಟ್ಟ ಕೊಲೆಸ್ಟ್ರಾಲ್ (LDL) ಕಡಿಮೆ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡುತ್ತವೆ.
ತೂಕ ನಿಯಂತ್ರಣಕ್ಕೆ ಸಹಾಯ
ಕ್ಯಾಲರಿ ಬಹಳ ಕಡಿಮೆ (100 ಗ್ರಾಂಗೆ 41 kcal) ಇದ್ದು, ಫೈಬರ್ ಜಾಸ್ತಿ ಇರುವುದರಿಂದ ಹೊಟ್ಟೆ ತುಂಬಿದ ಭಾವನೆ ಉಂಟಾಗಿ ತೂಕ ಇಳಿಸಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆ ಸುಧಾರಿಸುತ್ತದೆ
ಹೇರಳವಾಗಿರುವ ಫೈಬರ್ ಮಲಬದ್ಧತೆ ತಡೆದು, ಜೀರ್ಣವ್ಯವಸ್ಥೆಯನ್ನು ಸುಗಮಗೊಳಿಸುತ್ತದೆ ಮತ್ತು ಆಮ್ಲೀಯತೆ ಕಡಿಮೆ ಮಾಡುತ್ತದೆ.
ಕ್ಯಾನ್ಸರ್ ಅಪಾಯ ಕಡಿಮೆ
ಆ್ಯಂಟಿಆಕ್ಸಿಡೆಂಟ್‌ಗಳಾದ ಬೀಟಾ-ಕ್ಯಾರೋಟೀನ್, ಲುಟೀನ್, ಝೀಯಾಕ್ಸಾಂಥಿನ್ ಮತ್ತು ಪಾಲಿಅಸಿಟಿಲೀನ್‌ಗಳು ಫ್ರೀ ರಾಡಿಕಲ್‌ಗಳ ವಿರುದ್ಧ ಹೋರಾಡಿ, ಶ್ವಾಸಕೋಶ, ಜಠರ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯ ಕಡಿಮೆ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆ ನಿಯಂತ್ರಣ
ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವುದರಿಂದ ರಕ್ತದ ಸಕ್ಕರೆ ಹಠಾತ್ತನೆ ಏರಿಕೆಯಾಗುವುದಿಲ್ಲ. ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಡಯಾಬಿಟೀಸ್ ನಿಯಂತ್ರಣಕ್ಕೆ ಸಹಾಯ ಮಾಡುತ್ತವೆ.
ಗಮನಿಸಿ
ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.