ಸಿಎಂ ಡಿಕೆಶಿ ಸಚಿವ ಸಂಪುಟ ವಿಸ್ತೆರಣೆ; ಲೋಕಭವನದಲ್ಲಿ19 ಸಚಿವರು ಪ್ರಮಾಣವಚನ ಸ್ವೀಕಾರ; ಯಾರ್ಯಾರು ಇಲ್ಲಿ ನೋಡಿ!

ಚಲುವರಾಯಸ್ವಾಮಿ
ಚಲುವರಾಯಸ್ವಾಮಿ
Published on
cheluvarayaswamy

ಚಲುವರಾಯಸ್ವಾಮಿ

ಸಿಎಂ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಇಂದು(ಆ. 03) ಲೋಕಭವನದಲ್ಲಿ 19 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಚಿವರಾಗಿ ಚಲುವರಾಯಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಶಾಸಕರಾಗಿದ್ದಾರೆ. ಕಳೆದ ಸರ್ಕಾರದಲ್ಲೂ ಸಚಿವರಾಗಿದ್ದರು.
B Nagendra

ಬಿ. ನಾಗೇಂದ್ರ

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ಬಿ.ನಾಗೇಂದ್ರ, ಅವರು ಎರಡನೇ ಬಾರಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಕಳೆದ ಸರ್ಕಾರದಲ್ಲಿ ಸಚಿವರಾಗಿದ್ದರು. ಆದರೆ ವಾಲ್ಮೀಕಿ ಹಗರಣದಲ್ಲಿ ರಾಜೀನಾಮೆ ನೀಡಿದ್ದರು.
S S Mallikarjun

ಎಸ್​.ಎಸ್​. ಮಲ್ಲಿಕಾರ್ಜುನ

ದಾವಣೆಗೆರೆ ಉತ್ತರ ಕ್ಷೇತ್ರದ ಶಾಸಕರಾಗಿರುವ ಎಸ್​.ಎಸ್.ಮಲ್ಲಿಕಾರ್ಜುನ ಅವರು ನಾಲ್ಕನೇ ಬಾರಿ ಸಚಿವರಾಗಿದ್ದಾರೆ.
Basavaraj Rayareddy

ಬಸವರಾಜ ರಾಯರೆಡ್ಡಿ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕರಾಗಿರುವ ರಾಯರೆಡ್ಡಿಯವರು, ಮೂರನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Laxman savadi

ಲಕ್ಷ್ಮಣ್ ಸವದಿ

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ನೂತನ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Madu Bangarappa

ಎಸ್.ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಶಾಸಕಾಗಿರುವ ಎಸ್​.ಬಂಗಾರಪ್ಪ ಅವರು ಎರಡನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Balakrishna

ಹೆಚ್​.ಸಿ.ಬಾಲಕೃಷ್ಣ

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಕ್ಷೇತ್ರದ ಶಾಸಕರಾಗಿರುವ ಹೆಚ್​.ಸಿ.ಬಾಲಕೃಷ್ಣ ಅವರು ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Basavanthappa

ಕೆ.ಎಸ್.ಬಸವಂತಪ್ಪ

ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಶಾಸಕರಾಗಿರುವ ಕೆ.ಎಸ್.ಬಸವಂತಪ್ಪ ಅವರು ಇದೇ ಮೊದಲ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ajay shingh

ಡಾ.ಅಜಯ್ ಸಿಂಗ್

ಬೀದರ್ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಶಾಸಕರಾಗಿರುವ ಡಾ.ಅಜಯ್ ಸಿಂಗ್ ಅವರು ಇದೇ ಮೊದಲ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ಸಿಎಂ ಧರ್ಮಸಿಂಗ್ ಅವರ ಪುತ್ರರಾಗಿದ್ದಾರೆ.
Santosh lad

ಸಂತೋಷ್ ಲಾಡ್

ಧಾರವಾಡ ಜಿಲ್ಲೆಯ ಕಲ್ಲಘಟಗಿ ಕ್ಷೇತ್ರದ ಶಾಸಕರಾಗಿರುವ ಸಂತೋಷ್ ಲಾಡ್ ಅವರು, ಮೂರನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Zameer khan

ಬಿ.ಝೆಡ್. ಜಮೀರ್ ಖಾನ್

ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಅವರು ನಾಲ್ಕನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Shivalinge Gowda

ಕೆ.ಎಂ.ಶಿವಲಿಂಗೇಗೌಡ

ಹಾಸನ ಜಿಲ್ಲೆಯ ಅರಸಿಕೇರೆ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ಕೆ.ಎಂ.ಶಿವಲಿಂಗೇಗೌಡ ಅವರು ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Vijayananda Kashappanavar

ವಿಜಯಾನಂದ ಕಾಶಪ್ಪನವರ

ಬಾಗಲಕೋಟೆ ಜಿಲ್ಲೆಯ ಹುನಗುಂದ ಕ್ಷೇತ್ರದ ಶಾಸಕರಾಗಿರುವ ವಿಜಯಾನಂದ ಕಾಶಪ್ಪನವರು ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
PuttarangaShetty

ಪುಟ್ಟರಂಗಶೆಟ್ಟಿ

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪುಟ್ಟರಂಗಶೆಟ್ಟಿಯವರು ಎರಡನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
shivaraj thangadagi

ಎಸ್.ಶಿವರಾಜ ತಂಗಡಗಿ

ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಶಾಸಕರಾಗಿರುವ ಶಿವರಾಜ ತಂಗಡಗಿ ಅವರು ನಾಲ್ಕನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Rizwan arshad

ರಿಜ್ವಾನ್ ಅರ್ಷದ್

ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಶಾಸಕರಾಗಿರುವ ರಿಜ್ವಾನ್ ಅರ್ಷದ್ ಅವರು ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Rudrappa lamani

ರುದ್ರಪ್ಪ ಲಮಾಣಿ

ಹಾವೇರಿ ಕ್ಷೇತ್ರದ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರು ಎರಡನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
T Raghumurthy

ಟಿ.ರಘುಮೂರ್ತಿ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದ ಶಾಸಕರಾಗಿರುವ ಟಿ.ರಘುಮೂರ್ತಿ ಅವರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net