ತ್ವಚೆಯ ಸೌಂದರ್ಯವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ತ್ವಚೆಯನ್ನು ಕಾಂತಿಯುತವಾಗಿಡಲು ಮತ್ತು ಸುಕ್ಕುಗಳನ್ನು ತಡೆಯಲು ಸಹಾಯ ಮಾಡುತ್ತವೆ..ರೋಗನಿರೋಧಕ ಶಕ್ತಿ ಹೆಚ್ಚಳಇದರಲ್ಲಿ ಸಮೃದ್ಧವಾಗಿರುವ ವಿಟಮಿನ್ ಸಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಸೋಂಕುಗಳ ವಿರುದ್ಧ ಹೋರಾಡಲು ನೆರವಾಗುತ್ತದೆ..ಜೀರ್ಣಕ್ರಿಯೆಗೆ ಸಹಕಾರಿಅಧಿಕ ನಾರಿನಂಶ ಮತ್ತು ನೀರಿನಾಂಶವನ್ನು ಹೊಂದಿರುವ ಖರ್ಬೂಜ, ಮಲಬದ್ಧತೆಯನ್ನು ನಿವಾರಿಸಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ..ಕಣ್ಣಿನ ಆರೋಗ್ಯಕ್ಕೆ ಉತ್ತಮಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ-ಕ್ಯಾರೋಟಿನ್ ಅಂಶಗಳು ಕಣ್ಣಿನ ದೃಷ್ಟಿಯನ್ನು ಚುರುಕುಗೊಳಿಸಲು ಮತ್ತು ವಯಸ್ಸಾದಂತೆ ಬರುವ ಕಣ್ಣಿನ ಸಮಸ್ಯೆಗಳನ್ನು ತಡೆಯಲು ಸಹಕಾರಿ..ರಕ್ತದೊತ್ತಡ ನಿಯಂತ್ರಣಇದರಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ, ಇದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ.