ಪ್ರತಿದಿನ 30 ನಿಮಿಷಗಳ ಕಾಲ ನಡೆಯುವುದು, ಓಡುವುದು, ಸೈಕ್ಲಿಂಗ್ ಅಥವಾ ಭಾರ ಎತ್ತುವಂತಹ ವ್ಯಾಯಾಮಗಳನ್ನು ಮಾಡುವುದರಿಂದ ಇದು ಸ್ನಾಯುಗಳು ಮತ್ತು ಮೂಳೆಗಳನ್ನು ಬಲವಾಗಿರಿಸುತ್ತದೆ.
ಸಮತೋಲಿತ ಆಹಾರ ಸೇವನೆ
ಪ್ರತಿನಿತ್ಯ ಕೊಬ್ಬು, ಸಕ್ಕರೆ ಅಧಿಕವಾಗಿರುವ ಆಹಾರಗಳ ಸೇವನೆಯನ್ನು ತಪ್ಪಿಸಿರಿ. ಬದಲಿಗೆ ಹಣ್ಣುಗಳು, ಹಸಿರು ತರಕಾರಿಗಳು, ದ್ವಿದಳ ಧಾನ್ಯಗಳು, ಮೀನು, ಮೊಟ್ಟೆಗಳು ಮತ್ತು ಪ್ರೋಟೀನ್ ಭರಿತ ಆಹಾರವನ್ನು ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ.
ನಿಯಮಿತ ಆರೋಗ್ಯ ತಪಾಸಣೆ
ರಕ್ತದೊತ್ತಡ, ಸಕ್ಕರೆ, ಕೊಲೆಸ್ಟ್ರಾಲ್, ಯಕೃತ್ತಿನ ಕಾರ್ಯ ಮತ್ತು ಪ್ರಾಸ್ಟೇಟ್ ತಪಾಸಣೆಗಳನ್ನು ವರ್ಷಕ್ಕೊಮ್ಮೆ ಮಾಡಿಕೊಳ್ಳುವುದರಿಂದ ಮುಂದೆ ಆಗುವಂತಹ ಸಮಸ್ಯೆಗಳನ್ನು ತಡೆಯಬಹುದು.
ಧೂಮಪಾನ ಮತ್ತು ಮದ್ಯಪಾನ ನಿಲ್ಲಿಸಿ
ಧೂಮಪಾನವು ಹೃದಯ ಕಾಯಿಲೆ, ಅಸ್ತಮದಂತಹ ಕಾಯಿಲೆ ಅಪಾಯವನ್ನು ಹೆಚ್ಚಿಸಬಹುದು. ಆದರಿಂದ ಧೂಮಪಾನ ಮತ್ತು ಮದ್ಯಪಾನ ಮಾಡುವುದನ್ನು ಬಿಡುವುದರಿಂದ ಈ ರೀತಿಯ ಸಮಸ್ಯೆಯನ್ನು ತಡೆಗಟ್ಟಬಹುದು.
ಸಾಕಷ್ಟು ನಿದ್ರೆ
ಪ್ರತಿಯೊಬ್ಬ ಮನುಷ್ಯನು ದಿನಕ್ಕೆ 7-8 ಗಂಟೆಗಳ ಕಾಲ ನಿದ್ದೆ ಮಾಡುವುದರಿಂದ ಒತ್ತಡ ಕಡಿಮೆ ಮಾಡುವುದರ ಜೊತೆಗೆ ದೀರ್ಘಕಾಲ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ.