ಮಿಸ್ ಆಯ್ತು ಶತಕ
ನಿನ್ನೆ (ಜ.11) ಗುಜರಾತಿನ ವಡೋದರಾದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ದಾಖಲೆಗಳ ಸರದಾರ, ಚೇಸ್ ಮಾಸ್ಟರ್, 'ರನ್ ಮಷಿನ್' ಆದ ವಿರಾಟ್ ಕೊಹ್ಲಿ (93 ರನ್, 91 ಎಸೆತ, 8 ಬೌಂಡರಿ, 1 ಸಿಕ್ಸರ್) ಸ್ಫೋಟಕ ಇನ್ನಿಂಗ್ಸ್ ನೀಡಿ, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.