ಹಸಿರು ತರಕಾರಿಗಳಲ್ಲಿ ವಿಟಮಿನ್ ಸಿ, ಎ ಮತ್ತು ಆಂಟಿ ಆಕ್ಸಿಡೆಂಟ್‌ಗಳು ಹೇರಳವಾಗಿರುತ್ತದೆ. ಇವುಗಳ ಸೇವನೆಯು ಶೀತ, ಕೆಮ್ಮು, ಜ್ವರ ಮತ್ತು ಇತರ ಸಾಂಕ್ರಮಿಕ ರೋಗಗಳಿಂದ ರಕ್ಷಣೆ ನೀಡುತ್ತವೆ.
ಹೃದಯದ ಆರೋಗ್ಯ ಸುಧಾರಿಸುತ್ತದೆ
ಇದರಲ್ಲಿ ಪೊಟ್ಯಾಷಿಯಂ, ನಾರು ಮತ್ತು ಕಡಿಮೆ ಕೊಬ್ಬು ಇರುವುದರಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಜೊತೆಗೆ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ. ಹಾಗಾಗಿ ಅಪಾಯ ಇವುಗಳ ಸೇವನೆ ಮಾಡುವುರಿಂದ ಹೃದಯರೋಗ, ಸ್ಟ್ರೋಕ್ ಅಪಾಯ ಕಡಿಮೆಯಾಗುತ್ತದೆ.
ಜೀರ್ಣಕ್ರಿಯೆ ಉತ್ತಮಗೊಳಿಸುತ್ತದೆ
ಹೆಚ್ಚಿನ ನಾರಿನ ಅಂಶದಿಂದ ಕೂಡಿರುವುದರಿಂದ ಇದು ಮಲಬದ್ಧತೆ ದೂರವಾಗಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಸುಗಮವಾಗುತ್ತದೆ ಮತ್ತು ಆಮ್ಲತೆ ಸಮಸ್ಯೆಗಳು ಕಡಿಮೆಯಾಗುತ್ತವೆ.
ತೂಕ ನಿಯಂತ್ರಣಕ್ಕೆ ಸಹಾಯಕ
ಕಡಿಮೆ ಕ್ಯಾಲೋರಿ ಮತ್ತು ಹೆಚ್ಚು ನಾರು ಇರುವುದರಿಂದ ದೇಹಕ್ಕೆ ತೃಪ್ತಿ ನೀಡುತ್ತದೆ. ಇದರಿಂದ ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರಿಂದ ತೂಕ ನಷ್ಟಕ್ಕೆ ಸಹಾಯವಾಗುತ್ತದೆ.
ಕ್ಯಾನ್ಸರ್‌ಗಳ ಅಪಾಯ ಕಡಿಮೆ ಮಾಡುತ್ತದೆ
ತರಕಾರಿಗಳಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು ಮತ್ತು ಫೈಟೋಕೆಮಿಕಲ್‌ಗಳು ದೇಹದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತವೆ.
ಕಣ್ಣುಗಳು, ಚರ್ಮ ಮತ್ತು ಮೂಳೆಗಳ ಆರೋಗ್ಯಕ್ಕೆ ಉತ್ತಮ
ವಿಟಮಿನ್ ಎ ಕಣ್ಣುಗಳನ್ನು ರಕ್ಷಿಸುತ್ತದೆ, ವಿಟಮಿನ್ ಸಿ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ ಮತ್ತು ಕ್ಯಾಲ್ಸಿಯಂ, ವಿಟಮಿನ್ ಕೆ ಮೂಳೆಗಳನ್ನು ಬಲಪಡಿಸುತ್ತದೆ.