More

    ಹುತಾತ್ಮ ಯೋಧನ ಸ್ಮಾರಕ ನಿರ್ಮಾಣ; ಸೈನಿಕನ ತಂದೆಯನ್ನು ಥಳಿಸಿ ಬಂಧಿಸಿದ ಪೊಲೀಸರು!

    ಬಿಹಾರ: ಹುತಾತ್ಮ ಮಗನ ಸ್ಮಾರಕವನ್ನು ಸರ್ಕಾರಿ ಭೂಮಿಯಲ್ಲಿ ನಿರ್ಮಾಣ ಮಾಡಿದ ಕಾರಣಕ್ಕೆ ಬಿಹಾರ ಪೊಲೀಸರು ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಬಂಧಿಸಿದ ಘಟನೆ ನಡೆದಿದೆ.

    2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಸೇನಾಧಿಕಾರಿ ಜೈ ಕಿಶೋರ್ ಸಿಂಗ್ ಅವರ ನೆನಪಿಗಾಗಿ ಅವರ ತಂದೆ ಬಿಹಾರದ ವೈಶಾಲಿಯ ಹಳ್ಳಿಯೊಂದರ ಸರ್ಕಾರಿ ಭೂಮಿಯಲ್ಲಿ ಸ್ಮಾರಕ ನಿರ್ಮಿಸಿದ್ದಾರೆ. ಸರ್ಕಾರಿ ಭೂಮಿಯಲ್ಲಿ ಪ್ರತಿಮೆ ನಿರ್ಮಾಣ ಮಾಡಲು ಅವಕಾಶವಿಲ್ಲ. ಅಲ್ಲದೆ ಸರ್ಕಾರಕ್ಕೆ ಮನವಿ ಮಾಡಿದ್ದರೆ, ಸರ್ಕಾರವೇ ಪ್ರತಿಮೆ ನಿರ್ಮಾಣ ಮಾಡಲು ಸರಕಾರಿ ಭೂಮಿ ನೀಡುತಿತ್ತು. ಅದರ ಬದಲಿಗೆ ಉರಿನಲ್ಲಿದ್ದ ಸರ್ಕಾರಿ ಭೂಮಿಯಲ್ಲಿ ಅನುಮತಿ ಪಡೆಯದೇ ಪ್ರತಿಮೆ ನಿರ್ಮಾಣ ಮಾಡಿರುವುದು ಅಪರಾಧ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಡಿಗೆ ಮನೆಗಾಗಿ ಕಿಡ್ನಿ ಮಾರಾಟಕ್ಕಿಟ್ಟ ವ್ಯಕ್ತಿ!; ಟ್ವೀಟ್​​ ಪೋಸ್ಟ್​​ ವೈರಲ್​​

    ಈ ವಿಚಾರ ಗೊತ್ತಾಗುತ್ತಿದ್ದಂತೆ ಕೆರಳಿದ ಬಿಹಾರ ಪೊಲೀಸರು ಹುತಾತ್ಮ ಯೋಧನ ತಂದೆಯ ವಿರುದ್ಧ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಸ್ಮಾರಕ ನಿರ್ಮಾಣ ಮಾಡಿರುವ ಕುರಿತು ಪ್ರಕರಣ ದಾಖಲಿಸಿಕೊಂಡು ಹುತಾತ್ಮ ಯೋಧನ ತಂದೆಯನ್ನು ಥಳಿಸಿ ಠಾಣೆಗೆ ಎಳೆದೊಯ್ದಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

    ಇದನ್ನೂ ಓದಿ: ವಿಶ್ವಸಂಸ್ಥೆಯ ಸಮ್ಮೇಳನದಲ್ಲಿ ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿ!

    ರಾಜ್ ಕಪೂರ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 188, 323, 504  ಕಾಯ್ದೆಯ ವಿವಿಧ ಸೆಕ್ಷನ್‌ಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

    ಕರ್ತವ್ಯ ನಿರತ ಎಎಸ್​ಐಗೆ ಆಟೋ ಡಿಕ್ಕಿ; ಬ್ರೈನ್ ಡೆಡ್ ನಿಂದ ಮೃತ್ಯು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts