ಇಸ್ಪೀಟು ಅಡ್ಡೆಗೆ ದಾಳಿ, 23 ಮಂದಿ ಬಂಧನ

gambling
Published on

ಬೆಳ್ತಂಗಡಿ: ಮಡಂತ್ಯಾರು ಪೇಟೆಯಲ್ಲಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23 ಮಂದಿಯನ್ನು ಬಂಧಿಸಿ ನಗದು ಹಣ ಹಾಗೂ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಡಂತ್ಯಾರು ಪೇಟೆಯ ಬಳಿ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‌ನಲ್ಲಿ ಇಸ್ಪೀಟ್ ಅಡ್ಡೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ನಂದಕುಮಾರ್ ಹಾಗೂ ತಂಡ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಅಂದರ್ ಬಾಹರ್ ಆಟದಲ್ಲಿ ನಿರತರಾಗಿದ್ದ 23 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಿಂದ 36,729 ರೂ.ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net