More

    ಸಂಭ್ರಮ ಸಡಗರದಿಂದ ನಡೆದ ರಾಣೆಬೆನ್ನೂರ ಕಾ ರಾಜಾ ಗಣಪತಿ ಶೋಭಾಯಾತ್ರೆ

    ರಾಣೆಬೆನ್ನೂರ: ಇಲ್ಲಿನ ವಂದೇ ಮಾತರಂ ಸ್ವಯಂ ಸೇವಾ ಸಂಘದ ವತಿಯಿಂದ ನಗರದ ಮುನ್ಸಿಪಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿದ್ದ ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರತಿರೂಪದ ರಾಣೆಬೆನ್ನೂರ ಕಾ ರಾಜಾ ಗಣಪತಿಯ ಶೋಭಾಯಾತ್ರೆ ಭಾನುವಾರ ಲಕ್ಷಾಂತರ ಜನರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
    ಮುನ್ಸಿಪಲ್ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಾಜಿ ಸಚಿವ ರೇಣುಕಾಚಾರ್ಯ ಶೋಭಾಯಾತ್ರೆಗೆ ಚಾಲನೆ ನೀಡಿದರು. ನಂತರ ಇಲ್ಲಿಂದ ಹೊರಟ ಶೋಭಾಯಾತ್ರೆಯು ಹಳೇ ಪಿ.ಬಿ. ರಸ್ತೆ, ಸಾಲೇಶ್ವರ ದೇವಸ್ಥಾನ, ಸಿದ್ದೇಶ್ವರ ದೇವಸ್ಥಾನ, ಕುರುಬಗೇರಿ ಕ್ರಾಸ್, ದುರ್ಗಾ ಸರ್ಕಲ್, ಎಂ.ಜಿ. ರಸ್ತೆ, ಚತುರ್ಮುಖಿ ದೇವಸ್ಥಾನ, ದೊಡ್ಡಪೇಟೆ ರಸ್ತೆ, ಸುಭಾಸ ಚೌಕ್, ಬಸವೇಶ್ವರ ದೇವಸ್ಥಾನ, ರೊಡ್ಡನವರ ಓಣಿ, ಕುಂಬಾರ ಓಣಿ, ಓಂ ಸರ್ಕಲ್, ರಂಗನಾಥ ನಗರ, ಸಂಗಮ್ ಸರ್ಕಲ್, ಪೋಸ್ಟ್ ಸರ್ಕಲ್, ಮೆಡ್ಲೇರಿ ಕ್ರಾಸ್, ಬಸ್ ನಿಲ್ದಾಣ ಮಾರ್ಗವಾಗಿ ಹರಿಹರ ರಸ್ತೆಯಲ್ಲಿ ಎನ್.ವಿ. ಹೊಟೇಲ್‌ವರೆಗೆ ಸಾಗಿತು.
    ಅಲ್ಲಿಂದ ಮೂರ್ತಿಯನ್ನು ಹರಿಹರದ ತುಂಗಭದ್ರಾ ನದಿಗೆ ತೆಗೆದುಕೊಂಡು ಹೋಗಿ ವಿಸರ್ಜಿಸಲಾಯಿತು. ಕೇರಳದ ವಿಶೇಷ ಕಲಾ ತಂಡಗಳು, ಸ್ಥಳೀಯ ಡೊಳ್ಳು ಕುಣಿತ, ಸಮಾಳ, ಹಲಗೆಮೇಳ, ನಂದಿಕಂಬ, ಭಜನೆ ಜಾಂಜ್, ಅಣುಕು ಗೊಂಬೆಗಳು, ಹುಲಿ ಕುಣಿತ, ಪೂಜಾ ಕುಣಿತ, ಛಂಡಿ, ಮದ್ದಳೆ, ದೊಡ್ಡ ಹಲಗೆ, ಲೇಜಿಮ್, ಯಕ್ಷಗಾನ, ವೀರಗಾಸೆ ಹಾಗೂ ಮಹಿಳೆಯರು ಮತ್ತು ಪುರುಷರ ನೃತ್ಯಕ್ಕಾಗಿ ಆಯೋಜಿಸಿದ್ದ ಡಿಜೆ ಸಂಗೀತ ಶೋಭಾಯಾತ್ರೆಯ ವಿಶೇಷ ಆಕರ್ಷಣೆಯಾಗಿದ್ದವು. ಇದಲ್ಲದೆ ರಾಮ, ಲಕ್ಷ್ಮಣ, ಸೀತೆ, ಹನುಮಂತ ಒಳಗೊಂಡ ರಾಮಾಯಣದ ಮೂರ್ತಿಗಳು ಎಲ್ಲರ ಗಮನ ಸೆಳೆದವು. ದಾರಿಯುದ್ದಕ್ಕೂ ಯುವ ಜನಾಂಗ ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts