ಪ್ರಕೃತಿ ಚಿಕಿತ್ಸೆಗೆ ಗಾಂಧೀಜಿ ಒತ್ತು ನೀಡುತ್ತಿದ್ದರು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಚಿಕಿತ್ಸೆ ಮಹತ್ವ ಪಡೆದುಕೊಂಡಿವೆ. ಹಾಗಾಗಿಯೇ ಮಹಾತ್ಮ ಗಾಂಧೀಜಿಯವರು ಪ್ರಾರಂಭದಿಂದಲೇ ಈ ಚಿಕಿತ್ಸಾ ಪದ್ದತಿಗೆ ಹೆಚ್ಚಿನ ಒತ್ತು ಕೊಡುತಿದ್ದರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಕರ್ನಾಟಕ ಪ್ರದೇಶ ಪ್ರಕೃತಿ ಚಿಕಿತ್ಸಾ ಪರಿಷತ್, ಅಂತರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆ (ಐ.ಎನ್.ಓ), ರಾಷ್ಟ್ರೀಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಕಾಡೆಮಿ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಡಾ.ಹೊ.ಶ್ರೀನಿವಾಸಯ್ಯ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ‘ಪ್ರಕೃತಿ ಚಿಕಿತ್ಸೆಗೆ ಮಹಾತ್ಮ ಗಾಂಧೀಜಿಯವರ ಕೊಡುಗೆ’ ಕುರಿತ ವಿಚಾರ ಸಂಕೀರ್ಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯವರು ಪ್ರಕೃತಿ ಚಿಕಿತ್ಸೆಯಲ್ಲಿ ಬಹಳ ಆಳವಾದ ನಂಬಿಕೆ ಹೊಂದಿದ್ದರು. ತಾವು ಹೋದಲೆಲ್ಲಾ ಅನೇಕರಿಗೆ ಇದರ ಬಗ್ಗೆಯೆ ಹೇಳುತಿದ್ದರು. ಜೊತೆಗೆ ತಾವು ಅದನ್ನೆ ಅನುಸರಿಸುತಿದ್ದರು. ಈ ನಿಟ್ಟಿನಲ್ಲಿ ನಾವು ಕೂಡ ಪ್ರಕೃತಿ ಚಿಕಿತ್ಸಾ ಪದ್ದತಿಯನ್ನು ಉಳಿಸಿ ಬೇಳೆಸಬೇಕಿದೆ ಎಂದರು.

ಅಂತರಾಷ್ಟ್ರೀಯ ಪ್ರಾಕೃತಿಕ ಚಿಕಿತ್ಸಾ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಅನಂತ ಬಿರಾದಾರ ಮಾತನಾಡಿ, ಪ್ರಕೃತಿ ಚಿಕಿತ್ಸೆ ಪದ್ದತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಸ್ಥೆ ದೇಶಾದ್ಯಂತ ಕೆಲಸ ಮಾಡುತ್ತಿದೆ. ಆರೋಗ್ಯ ಕ್ಷೇತ್ರಕ್ಕೆ ಸರ್ಕಾರಗಳ ಬಜೆಟ್ ಕಡಿಮೆಯಾಗಬೇಕು ಹಾಗೂ ಉತ್ತಮ ಆರೋಗ್ಯಕ್ಕಾಗಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಪ್ರತಿಯೊಬ್ಬರು ಪ್ರಕೃತಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಬೇಕು. ಇದಕ್ಕೆ ಸರ್ಕಾರಗಳು ಕೂಡ ಕೈಜೊಡಿಸುವ ಮೂಲಕ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೈದ್ಯರು ಪ್ರಕೃತಿ ಚಿಕಿತ್ಸೆ ಕುರಿತು ಉಪನ್ಯಾಸ ನೀಡಿದರು. ಐ.ಎನ್.ಓ ರಾಷ್ಟ್ರೀಯ ಉಪಾದ್ಯಕ್ಷ ಡಾ. ಆರ್. ಹರೀಶ್, ರಾಜ್ಯದ್ಯಕ್ಷರಾದ ಡಾ.ಬಿ.ಟಿ ಚಿದಾನಂದ ಮೂರ್ತಿ, ಡಾ.ವೂಡೆ ಕೃಷ್ಣ, ಡಾ.ವೆಂಕಟಾಚಲಪತಿ, ಡಾ.ರಾಜಶೇಖರ್, ಡಾ.ಜಗದೀಶ್, ಡಾ.ವಿಕಾಸ ಕಾಮತ್ ಇತರರು ಇದ್ದರು.

Share This Article

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…

ದಿನಕ್ಕೊಂದು ಬಾಳೆಹಣ್ಣು ಎನ್ನುವ ಹಾಗೆ 30 ದಿನ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

 ಬೆಂಗಳೂರು: ಪ್ರತಿದಿನ ಬಾಳೆಹಣ್ಣು ತಿನ್ನಬೇಕು. ಇದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮಾವು ಹಣ್ಣುಗಳ ರಾಜನಾಗಿರಬಹುದು ಆದರೆ…

ತಲೆಯಲ್ಲಿ ಎರಡು ಸುಳಿ ಇದ್ರೆ ಎರಡು ಮದ್ವೆ ಆಗ್ತಾರೆ! ನಿಜಕ್ಕೂ ಇದು ಸತ್ಯಾನಾ?

ಬೆಂಗಳೂರು:  ಪ್ರತಿಯೊಬ್ಬರ ತಲೆಯ ಮೇಲೆ ಸುಳಿಗಳಿರುವುದು ಸಾಮಾನ್ಯ. ಈ ಸುರುಳಿಗಳು ಹುಟ್ಟಿನಿಂದಲೇ ತಲೆಯ ಮೇಲೆ ಇರುತ್ತವೆ.…