More

    ಗಾಂಧಿ, ಡಾ. ಅಂಬೇಡ್ಕರ್ ತತ್ವಗಳು ಎಂದಿಗೂ ಪ್ರಸ್ತುತ!

    ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಬರಿ ವ್ಯಕ್ತಿಯಲ್ಲ, ಈ ದೇಶದ ಶಕ್ತಿ. ವಿಶ್ವಕ್ಕೆ ಮಾದರಿಯಾಗುವ ಸಂವಿಧಾನವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿದ್ದಾರೆ. ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಸಿಇಒ ಜಯರಾಮ ರಾಯಪುರ ಹೇಳಿದರು.

    ಇದನ್ನೂ ಓದಿ: ಎಷ್ಟೇ ಪ್ರಯತ್ನಿಸಿದ್ರೂ ಮಣಿಪುರವನ್ನು ಒಡೆಯಲು ಬಿಡಲ್ಲ: ಅಮಿತ್​ ಷಾ

    ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಅಂಗವಾಗಿ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದ ಮೂರನೇ ಮಹಡಿಯಲ್ಲಿರುವ ಕರ್ನಾಟಕ ಜಲಸಾರಿಗೆ ಮಂಡಳಿ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

    ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ನಾವು ಅಳವಡಿಸಿಕೊಂಡು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕಿದೆ. ಸಮಾನತೆ, ಭಾತೃತ್ವ, ನ್ಯಾಯದ ಸಂದೇಶವನ್ನು ಸಾರಿದ ಅಂಬೇಡ್ಕರ್ ಅವರನ್ನು ಆರಾಧಿಸುವುದರ ಜೊತೆಗೆ ಅವರ ಸಿದ್ದಾಂತವನ್ನು ಅನುಸರಿಸಬೇಕಿದೆ ಎಂದು ಕರೆಕೊಟ್ಟರು.

    ಒಂದು ಸಮಾಜದಲ್ಲಿ ಒಂದಿಬ್ಬರ ಮನಸ್ಥಿತಿ ಬದಲಾದರೆ ಇಡೀ ಸಮಾಜ ಬದಲಾವಣೆಯನ್ನು ಹೊಂದಲು ಸಾಧ್ಯವಿಲ್ಲ, ಇಡೀ ಸಮುದಾಯವೇ ಬದಲಾವಣೆಯತ್ತಾ ಹೆಜ್ಜೆ ಹಾಕಿದರೆ ಸರ್ವರ ಏಳಿಗೆ ಖಂಡಿತ ಸಾಧ್ಯ. ಆ ಹಿನ್ನಲೆಯಲ್ಲಿ ಅಂಬೇಡ್ಕರ್ ಮತ್ತು ಗಾಂಧಿ ಅವರ ಚಿಂತನೆ ಸದಾ ನಮಗೆಲ್ಲರಿಗೂ ಉತ್ತಮ ಮಾರ್ಗದರ್ಶಿ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಕರ್ನಾಟಕ ಜಲಸಾರಿಗೆ ಮಂಡಳಿ ಕಚೇರಿಯಿಂದ ಚೊಚ್ಚಲ ಕೆಎಂಬಿ ಮಾಸಪತ್ರಿಕೆ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

    ನಟ ಶಿವರಾಜ್​ಕುಮಾರ್​ ಆಸ್ತಿ ಮೊತ್ತ ಇಷ್ಟೊಂದಾ? ಸ್ಟಾರ್ ನಟನ ಆಸ್ತಿ ಮೌಲ್ಯ, ಸಾಲದ ಬಗ್ಗೆ ಇಲ್ಲಿದೆ ಮಾಹಿತಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts