

ಪುತ್ತೂರು: ಗಾಂಽಜಿಯವರ ಆಚಾರ-ವಿಚಾರ, ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕಾಗಿ, ದೇಶಕ್ಕಾಗಿ ಕೆಲಸ ಮಾಡಿದಾಗ ಆಚರಣೆಗೆ ಹೆಚ್ಚು ಮಹತ್ವ ಬರುತ್ತದೆ. ವಿವಿಧ ರಾಜವಂಶಗಳ ಮೂಲಕ ಹಂಚಿ ಹೋಗಿದ್ದ ಭಾರತದಲ್ಲಿ ನಾವು ಭಾರತೀಯರು ಎಂಬ ಭಾವನೆಯನ್ನು ಪ್ರತಿಯೊಬ್ಬರಲ್ಲಿ ಮೂಡಿಸಿದ್ದಾರೆ. ಯಾವುದೇ ಜ್ಞಾನವಿಲ್ಲದೆ ಉತ್ತಮ ವ್ಯಕ್ತಿಗಳಾಗಲು ಸಾಧ್ಯವಿಲ್ಲ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.
ಗಾಂಽಕಟ್ಟೆ ಸಮಿತಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಸ್ ನಿಲ್ದಾಣದ ಬಳಿಯ ಗಾಂಽಕಟ್ಟೆಯಲ್ಲಿ ನಡೆದ ಗಾಂಽ ಜಯಂತಿ ಕಾರ್ಯಕ್ರಮದಲ್ಲಿ ಗಾಂಽ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಽಕಾರಿ ಲೋಕೇಶ್ ಎಸ್.ಆರ್ ಮಾತನಾಡಿ ಗಾಂಽಜಿಯವರ ಅಹಿಸ್ಮಾತ್ಮ ನೀತಿ ವಿಶ್ವದಲ್ಲೇ ಖ್ಯಾತಿ ಪಡೆದಿದೆ. ಅವರ ತತ್ವ, ಆದರ್ಶಗಳು ಇಂದಿನ ಪೀಳಿಗೆಗೆ ಆದರ್ಶವಾಗಿದ್ದು, ಅವರ ಪುಸ್ತಕಗಳನ್ನು ಓದಿ ಜ್ಞಾನ ವೃದ್ಧಿಸಿಕೊಳ್ಳಬೇಕು. ದೇಶದ ಉದ್ಧಾರಕ್ಕಾಗಿ ಹಲವು ಯೋಜನೆಗಳನ್ನು ತಂದಿದ್ದರು. ಹಳ್ಳಿಗಳ ಉದ್ಧಾರ ಅವರ ಕನಸಾಗಿತ್ತು ಎಂದರು.
ನಗರ ಠಾಣೆಯ ನಿರೀಕ್ಷಕ ಜಾನ್ಸನ್ ಡಿ’ ಸೋಜ, ಪುರಸಭಾ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಕಾಂಗ್ರೆಸ್ ರಾಜ್ಯ ವಕ್ತಾರ ಅಮಳ ರಾಮಚಂದ್ರ ಮಾತನಾಡಿದರು.
ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿ’ ಸೋಜ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ರೂಪರೇಖಾ ಆಳ್ವ, ರಾಮಣ್ಣ ಪಿಳಿಂಜ, ಲ್ಯಾನ್ಸಿ ಮಸ್ಕರೇನಸ್, ಮೌರೀಸ್ ಮಸ್ಕರೇನಸ್ ಮತ್ತಿತರರಿದ್ದರು.
ಗಾಂಽಕಟ್ಟೆ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿ, ವಂದಿಸಿದರು. ಚಂದ್ರಪ್ರಭಾ ಗೌಡ ಕಾರ್ಯಕ್ರಮ ನಿರೂಪಿಸಿದರು.