ದೋಹಾ-ಕತಾರ್​ನಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಗಾಂಧಿ ಜಯಂತಿ..

Gandhi
Published on

ದೋಹಾ-ಕತಾರ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ದೋಹಾ ಕತಾರ್​ನಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು.

ಕತಾರ್​ನಲ್ಲಿರುವ ಭಾರತದ ರಾಯಭಾರಿ ಡಾ.ದೀಪಕ್ ಮಿತ್ತಲ್​ ಅವರು ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿದರು. ಅಲ್ಲದೆ ರಾಯಭಾರ ಕಚೇರಿಯ ಪರಿಸರದಲ್ಲಿ ಗಿಡ ನೆಡುವ ಮೂಲಕ ಗಾಂಧಿ ಜಯಂತಿಯನ್ನು ಸ್ಮರಣೀಯಗೊಳಿಸಲಾಯಿತು.

ಕೋವಿಡ್ ಪಿಡುಗಿನ ಈ ಸಂದರ್ಭದಲ್ಲಿ ಗಾಂಧೀಜಿ ಅವರ ಆದರ್ಶ ಹಾಗೂ ತತ್ವಗಳ ಮಹತ್ವ ಹಾಗೂ ಪ್ರಸ್ತುತತೆಯನ್ನು ಅವರು ಪ್ರಸ್ತಾಪಿಸಿದರು. ಇಲ್ಲಿನ ಇಂಡಿಯನ್​ ಕಲ್ಚರಲ್​ ಸೆಂಟರ್​ನಲ್ಲಿ ಭಜನ್​ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಕೊನೆಯಲ್ಲಿ ಗಾಂಧೀಜಿಯವರ ಸಂದೇಶಗಳನ್ನು ಒಳಗೊಂಡ ವಿಶೇಷವಾದ ವಿಡಿಯೋವೊಂದನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮ ಸಮಾಪ್ತಿಗೊಂಡಿತು.

WhatsApp Image 2020-10-02 at 9.24.58 PM
WhatsApp Image 2020-10-02 at 9.24.59 PM (1)
WhatsApp Image 2020-10-02 at 9.24.59 PM

ದೋಹಾ-ಕತಾರ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ದೋಹಾ ಕತಾರ್​ನಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು.

ಕತಾರ್​ನಲ್ಲಿರುವ ಭಾರತದ ರಾಯಭಾರಿ ಡಾ.ದೀಪಕ್ ಮಿತ್ತಲ್​ ಅವರು ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿದರು. ಅಲ್ಲದೆ ರಾಯಭಾರ ಕಚೇರಿಯ ಪರಿಸರದಲ್ಲಿ ಗಿಡ ನೆಡುವ ಮೂಲಕ ಗಾಂಧಿ ಜಯಂತಿಯನ್ನು ಸ್ಮರಣೀಯಗೊಳಿಸಲಾಯಿತು.

ಕೋವಿಡ್ ಪಿಡುಗಿನ ಈ ಸಂದರ್ಭದಲ್ಲಿ ಗಾಂಧೀಜಿ ಅವರ ಆದರ್ಶ ಹಾಗೂ ತತ್ವಗಳ ಮಹತ್ವ ಹಾಗೂ ಪ್ರಸ್ತುತತೆಯನ್ನು ಅವರು ಪ್ರಸ್ತಾಪಿಸಿದರು. ಇಲ್ಲಿನ ಇಂಡಿಯನ್​ ಕಲ್ಚರಲ್​ ಸೆಂಟರ್​ನಲ್ಲಿ ಭಜನ್​ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಕೊನೆಯಲ್ಲಿ ಗಾಂಧೀಜಿಯವರ ಸಂದೇಶಗಳನ್ನು ಒಳಗೊಂಡ ವಿಶೇಷವಾದ ವಿಡಿಯೋವೊಂದನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮ ಸಮಾಪ್ತಿಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net