Gandhi Jayanti : ರಾಷ್ಟ್ರಪಿತನಿಗೆ ಪುಷ್ಟ ನಮನ ಸಲ್ಲಿಸಿದ ಪ್ರಧಾನಿ ಮೋದಿ

gandhi jayanti
Published on

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಜನ್ಮ ದಿನಾಚರಣೆ (Gandhi Jayanti ) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ( Mahatma Gandhi ) ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವು ನಾಯಕರು ಮಹಾತ್ಮ ಗಾಂಧಿಗೆ ( Gandhi Jayanti ) ಶ್ರದ್ಧಾಂಜಲಿ ಸಲ್ಲಿಸಿದರು.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮೋದಿಯವರು, ಪೂಜ್ಯ ಬಾಪು ಅವರ ಜನ್ಮದಿನದಂದು ಎಲ್ಲಾ ದೇಶವಾಸಿಗಳ ಪರವಾಗಿ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ ಎಂದು ಹೇಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net