More

    ಗ್ರಾಮ ಅಭಿವೃದ್ಧಿಯ ಪರಿಕಲ್ಪನೆ ಸಾಕಾರಗೊಳ್ಳಲಿ: ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಆಶಯ

    ಮಂಡ್ಯ: ಮಹಾತ್ಮ ಗಾಂಧೀಜಿ ಅವರ ಪರಿಕಲ್ಪನೆಯನ್ನು ಸಾಕಾರಗೊಳಿಸುವಂತೆ ಗಾಂಧಿ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳು ಆಗಲಿ ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಆಶಯ ವ್ಯಕ್ತಪಡಿಸಿದರು.
    ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ತಾಲೂಕಿನ ಎಚ್.ಮಲ್ಲಿಗೆರೆ ಫಾರ್ಮ್‌ನಲ್ಲಿರುವ ಗಾಂಧಿ ಗ್ರಾಮವನ್ನು 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
    ದಿ.ಡಾ.ಜಿ.ಮಾದೇಗೌಡರು ಗಾಂಧಿ ಗ್ರಾಮ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದರು. ಗೌಡರ ಆಶಯ, ನಂಬಿಕೆಯನ್ನು ಬಲಪಡಿಸುವಂತೆ ಅಭಿವೃದ್ಧಿ ಕೆಲಸಗಳಾಗಿ ಸಮುದಾಯಕ್ಕೆ ಅನುಕೂಲವಾಗಲಿ ಎಂದರು.
    ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷರೂ ಆದ ಎಂಎಲ್‌ಸಿ ಮಧು ಜಿ.ಮಾದೇಗೌಡ ಮಾತನಾಡಿ, ಗಾಂಧೀಜಿ ಅವರ ಚಿಂತನೆ, ಆಶಯಗಳಂತೆ ಮಾದರಿಯಾಗಿ ಗಾಂಧಿ ಗ್ರಾಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
    ಎಚ್.ಮಲ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಮ್ಮ, ಮಾಜಿ ಅಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯೆ ಭಾಗಮ್ಮ, ಟ್ರಸ್ಟ್ ಪದಾಧಿಕಾರಿಗಳಾದ ಬಿ.ಎಂ.ನಂಜೇಗೌಡ, ಎನ್.ರಾಜು, ಅಂಜನಾ ಶ್ರೀಕಾಂತ್, ಮಾದಪ್ಪ, ನಾಗರತ್ನ, ಜಯರಾಮು, ಪ್ರಶಾಂತ್‌ಬಾಬು, ಎಂ.ರಾಜಣ್ಣ, ರಾಮಲಿಂಗಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts