More

    ಗಾಂಧೀಜಿ ಆಶಯವೇ ಗ್ರಾಮಾಭಿವೃದ್ಧಿ ಸಂಸ್ಥೆಗೆ ಪ್ರೇರಣೆ

    ಪಿರಿಯಾಪಟ್ಟಣ: ಗಾಂಧೀಜಿ ಅವರ ಮದ್ಯಪಾನಮುಕ್ತ ಸಮಾಜದ ಆಶಯದಿಂದ ಪ್ರೇರಣೆಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಮದ್ಯವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ತಿಳಿಸಿದರು.


    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪಟ್ಟಣದ ರೋಟರಿ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಗಾಂಧಿ ಜಯಂತಿ ಮತ್ತು ನವ ಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    ಸಮಾಜದಲ್ಲಿ ಕುಡಿತ ಚಟದಿಂದ ಎಷ್ಟೋ ಜನರು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದನ್ನು ಪರಿಣಾಮಕಾರಿಯಾಗಿ ತಡೆಯಲು ನಮ್ಮ ಸಂಸ್ಥೆ ಸದಾ ಯತ್ನಿಸುತ್ತಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಮದ್ಯವರ್ಜನ ಶಿಬಿರಗಳನ್ನು ರಾಜ್ಯದಂತ ಹಮ್ಮಿಕೊಂಡಿದ್ದರ ಫಲ ಸುಮಾರು 1.20 ಲಕ್ಷ ಜನ ಮದ್ಯ ಪಾನಮುಕ್ತ ಜೀವನ ನಡೆಸುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.


    ತಹಸೀಲ್ದಾರ್ ಕುಂಞ ಅಹಮದ್ ಮಾತನಾಡಿ, ಗಾಂಧೀಜಿ ಮತ್ತು ಲಾಲ್ ಬಹಾದೂರ್ ಶಾಸ್ತ್ರಿ ಅವರ ಆದರ್ಶ ಜೀವನ ನಮಗೆಲ್ಲ ಸ್ಪೂರ್ತಿಯ ಸೆಲೆಯಾಗಿದೆ ಎಂದರಲ್ಲದೆ, ಧರ್ಮಸ್ಥಳ ಯೋಜನೆಯಿಂದ ಮಾಡುತ್ತಿರುವ ಸಮಾಜಮುಖಿ ಚಟುವಟಿಕೆಗಳು ಶ್ಲಾಘನೀಯ ಎಂದು ತಿಳಿಸಿದರು.

    ಪೊಲೀಸ್ ಇನ್‌ಸ್ಪೆಕ್ಟರ್ ಶ್ರೀಧರ್ ಮಾತನಾಡಿದರು. ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸದಸ್ಯ ಷಣ್ಮುಖರಾವ್, ಮೈಮುಲ್ ನಿರ್ದೇಶಕ ಎಚ್.ಡಿ.ರಾಜೇಂದ್ರ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅಂಬಿಕಾ, ಪುರಸಭೆ ಸದಸ್ಯ ರವಿ, ಮುತ್ತೂರು ಗ್ರಾ.ಪಂ. ಸದಸ್ಯ ನಂದೀಶ, ಮುಖಂಡ ಎನ್.ಸ್ವಾಮಿ, ಯೋಜನಾಧಿಕಾರಿ ಸುರೇಶ ಶೆಟ್ಟಿ, ಗೀತಾ, ಪದ್ಮಾ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts