More

    ಜನಸಾಮಾನ್ಯರಿಗೆ ಬಿಜೆಟ್ ಅರಿವು ಮೂಡಿಸಿ

    ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ನೀಡಿರುವ ಬಜೆಟ್ ಮಾಹಿತಿಯನ್ನು ಪಕ್ಷದ ಕಾರ್ಯಕರ್ತರು ಸಾಮಾನ್ಯ ಜನರಿಗೆ ತಿಳಿಸಬೇಕೆಂದು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಹೇಳಿದರು.

    ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕೇಂದ್ರ ಮತ್ತು ರಾಜ್ಯ ಬಜೆಟ್ ಕುರಿತು ಆಯೋಜಿಸಿದ್ದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

    ಸರ್ಕಾರಗಳು ಅತ್ಯುತ್ತಮ ಬಜೆಟ್ ನೀಡಿ ಎಲ್ಲ ವರ್ಗದವರ ಅಭಿವೃದ್ಧಿಗೆ ಶ್ರಮಿಸುವುದರ ಜತೆಗೆ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿವೆ.ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದು ಇಡಿ ರಾಷ್ಟ್ರವೇ ಭಾರತದತ್ತ ತಿರುಗಿ ನೋಡುವಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಾರೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

    ರಾಷ್ಟ್ರ ನಿರ್ವಣದ ಪುಣ್ಯ ಕಾರ್ಯಕ್ಕೆ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ರಾಜಕಾರಣದಲ್ಲಿ ಇರುವ ಬಿಜೆಪಿ ಕಾರ್ಯಕರ್ತರು ಬಜೆಟ್​ನ ಅಂಕಿ ಅಂಶಗಳ ಜತೆಗೆ ಆರ್ಥಿಕ ಪರಿಸ್ಥಿ ಬಗ್ಗೆ ಚಿಂತನೆ ನಡೆಸಬೇಕು ಎಂದು ಹೇಳಿದರು.

    ಕಾಂಗ್ರೆಸ್, ಜೆಡಿಎಸ್​ಗೆ ಎಷ್ಟೇ ಜನಪರ ಬಜೆಟ್ ನೀಡಿದರೂ ಅವರು ನಿರಾಶಾದಾಯಕ ಬಜೆಟ್ ಎಂದೇ ಹೇಳುತ್ತಾರೆ. ಅವರ ಹೇಳಿಕೆಗೆ ಕಿವಿಗೊಡದೆ ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ನೀಡಿರುವ ಜನಪರ ಬಜೆಟ್ ಬಗ್ಗೆ ಗ್ರಾಮ ಮಟ್ಟದಲ್ಲಿ ಸಭೆಗಳನ್ನು ಏರ್ಪಡಿಸಿ, ಬಜೆಟ್​ನ ಸಂಪೂರ್ಣ ಮಾಹಿತಿಯನ್ನು ಜನರಿಗೆ ತಲುಪಿಸುವ ಕಾರ್ಯ ಕಾರ್ಯಕರ್ತರಿಂದ ಆಗಬೇಕೆಂದು ತಿಳಿಸಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ, ವಾಜಪೇಯಿ ಉತ್ತಮ ಕೆಲಸಗಳನ್ನು ಮಾಡಿದ್ದರು. ಅವರ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವಲ್ಲಿ ವಿಫಲರಾಗಿ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದ್ದೇವೆ. ಆದರೆ ಇಂದು ಕಾರ್ಯಕರ್ತರು ನರೇಂದ್ರ ಮೋದಿ ಅವರ ಬಜೆಟ್ ಮತ್ತು ಅಭಿವೃದ್ಧಿ ಸಾಧನೆಯನ್ನು ಪ್ರತಿಯೊಬ್ಬರಿಗೆ ತಿಳಿಸಿ ಅರಿವು ಮೂಡಿಸಬೇಕು ಎಂದರು.

    ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡಿರುವ ಬಜೆಟ್ ಬಗ್ಗೆ ವಿಶೇಷ ಕಾರ್ಯಾಗಾರ ನಡೆಸಿ ಪಕ್ಷದ ಕಾರ್ಯಕರ್ತರಿಗೆ ಮೊದಲು ಹೆಚ್ಚಿನ ಮಾಹಿತಿ ನೀಡಬೇಕು. ಗ್ರಾಮ ಮಟ್ಟದಲ್ಲಿ ಸಾರ್ವಜನಿಕ ಸಭೆಗಳನ್ನು ಏರ್ಪಡಿಸಿ ಬಜೆಟ್ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ತಿಳಿಸಿದ್ದಾರೆ ಎಂದರು.

    ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಪಕ್ಷದ ವಿಭಾಗ ಸಂಘಟನಾ ಕಾರ್ಯದರ್ಶಿ ಗಣೇಶ್ ರಾವ್, ಎಂ.ಆರ್.ದೇವರಾಜ್ ಶೆಟ್ಟಿ, ಬೆಳವಾಡಿ ರವೀಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts