More

    ಗಣೇಶೋತ್ಸವ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆ : ಗಣೇಶ ಸಮಿತಿ ಪ್ರಮುಖರೊಂದಿಗೆ ಡಿಸಿ ಸಭೆ

    ಶಿವಮೊಗ್ಗ:ಗಣೇಶ ಚೌತಿ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಿವಿಧ ಇಲಾಖೆಗಳಿಂದ ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲಾಗುವುದು. ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು 755 ಗಣೇಶ ಮೂರ್ತಿಗಳನ್ನು ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲು ಅನುಮತಿ ಕೋರಿ ನಮಗೆ ಮನವಿ ಸಲ್ಲಿಸಿದ್ದಾರೆ. ಗಣೇಶ ಸಮಿತಿಯವರ ಅನುಕೂಲಕ್ಕಾಗಿ ನಾಲ್ಕು ಕಡೆ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.
    ಗಣೇಶೋತ್ಸವ ಹಿನ್ನೆಲೆಯಲ್ಲಿ ವಿವಿಧ ಗಣೇಶೋತ್ಸವ ಸಮಿತಿ ಪ್ರಮುಖರೊಂದಿಗೆ ಭಾನುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೆಸ್ಕಾಂ, ಅಗ್ನಿಶಾಮಕ ದಳ, ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಅನುಮತಿಯನ್ನು ಒಂದೇ ಕಡೆ ಪಡೆಯಲು ಏಕಗವಾಕ್ಷಿ ಕೇಂದ್ರದಿಂದ ಅನುಕೂಲವಾಗಲಿದೆ ಎಂದರು.
    ಸಾರ್ವಜನಿಕ ಗಣೇಶೋತ್ಸವದಲ್ಲಿ ಸರ್ಕಾರ ಡಿಜೆ ಬಳಕೆಗೆ ನಿರ್ಬಂಧ ವಿಧಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಡಿಜೆ ಬಳಕೆಗೆ ಅವಕಾಶವಿರುವುದಿಲ್ಲ. ಮೈಕ್ ಬಳಕೆ ಮಾಡಿದರೂ ಹೆಚ್ಚು ಶಬ್ಧ ಮಾಲಿನ್ಯ ಉಂಟು ಮಾಡುತ್ತಿಲ್ಲ. ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಜೋರಾಗಿ ಮೈಕ್ ಹಾಕುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
    ಮೆರವಣಿಗೆ ಮಾರ್ಗ ಮೊದಲೇ ತಿಳಿಸಿ
    ಗಣೇಶ ಮೂರ್ತಿಗಳ ವಿಸರ್ಜನಾಪೂರ್ವ ಮೆರವಣಿಗೆ ಮಾರ್ಗವನ್ನು ಸಮಿತಿಯವರು ಮೊದಲೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಕಡೇ ಕ್ಷಣದಲ್ಲಿ ಮಾರ್ಗ ಬದಲಾವಣೆಗೆ ಅವಕಾಶವಿರುವುದಿಲ್ಲ. ಒಂದು ವೇಳೆ ಸಮಿತಿಯವರು ತಿಳಿಸಿದ ಮಾರ್ಗದಲ್ಲಿ ಮೆರವಣಿಗೆ ತೆರಳುವುದು ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಸರಿಯಲ್ಲ ಎಂದೆನಿಸಿದರೆ ಮಾರ್ಗ ಬದಲಾವಣೆಗೆ ಸೂಚಿಸುವ ಅಧಿಕಾರ ಜಿಲ್ಲಾಡಳಿತದ್ದಾಗಿದೆ ಎಂದು ಡಾ.ಆರ್.ಸೆಲ್ವಮಣಿ ಹೇಳಿದರು.
    ಕೆಲವು ಮುಖ್ಯ ರಸ್ತೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವುದು ಕಷ್ಟವಾಗಬಹುದು. ವಾಹನ ಸವಾರರಿಗೆ, ನಾಗರಿಕರಿಗೆ ತೊಂದರೆಯಾಗದಂತೆ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಸುಗಮ ವಾಹನ ಸಂಚಾರಕ್ಕೆ ಸಮಿತಿಯವರು ಸಹಕಾರ ನೀಡಬೇಕೆಂದು ತಿಳಿಸಿದರು.
    ಜಿಲ್ಲಾ ರಕ್ಷಣಾಧಿಕಾರಿ ಎಂ.ಬಿ.ಲಕ್ಷ್ಮೀಪ್ರಸಾದ್, ಎಎಸ್ಪಿ ವಿಕ್ರಂ ಆಮ್ಟೆ, ಡಿವೈಎಸ್‌ಪಿ ಬಾಲರಾಜ್, ವಿವಿಧ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts