25.7 C
Bangalore
Sunday, December 15, 2019

ಗಣೇಶ ಮೂರ್ತಿ ಸಾಗಿಸುವಾಗ ಅವಘಡ

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಬೆಳಗಾವಿ: ಇಲ್ಲಿಯ ಭಾಗ್ಯನಗರದ 4ನೇ ಕ್ರಾಸ್‌ನ ಧನಶ್ರೀ ಗಾರ್ಡನ್ ಬಳಿ ಸಾರ್ವಜನಿಕ ಗಣೇಶ ಮೂರ್ತಿಯನ್ನು ಸಾಗಿಸುತ್ತಿರುವಾಗ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಗಣೇಶ ಮೂರ್ತಿಗೆ ಮುಚ್ಚಿದ್ದ ಪ್ಲಾಸ್ಟಿಕ್‌ಗೆ ಬೆಂಕಿ ಹತ್ತಿಕೊಂಡು ಆತಂಕ ಮೂಡಿಸಿದ ಘಟನೆ ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ.

ಕೂಡಲೇ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ತಪ್ಪಿಸಿ ಹೆಚ್ಚಿನ ಅವಘಡ ತಡೆದಿದ್ದಾರೆ. ಸ್ಥಳೀಯರ ನೆರವಿನಿಂದಾಗಿ ಬೆಂಕಿ ನಂದಿಸಿದ್ದಾರೆ. ಘಟನೆಯ ನಂತರ ಮೂರ್ತಿ ನಿರ್ಮಾಣ ಮಾಡಿದ ಮೂರ್ತಿಕಾರರ ಬಳಿ ಹೆಸ್ಕಾಂ ಅಕಾರಿಗಳು ಹಾಗೂ ಟಿಳಕವಾಡಿ ಪೊಲೀಸರು ತೆರಳಿ ವಿಚಾರಣೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮೂರ್ತಿ ತಯಾರಿಸಿದ್ದು, ಇದನ್ನು ಇಲ್ಲಿಂದ ಸದಲಗಾದ ಡ್ರಾಗನ್ ಬಾಯ್ಸ ಗಣೇಶ ಉತ್ಸವ ಮಂಡಳದವರು  ತೆಗೆದುಕೊಂಡು ಒಯ್ಯುತ್ತಿದ್ದರು ಎಂದು ಹೆಸ್ಕಾಂ ಅಕಾರಿಗಳು ತಿಳಿಸಿದ್ದಾರೆ. ಮೂರ್ತಿ 13 ಅಡಿ ಎತ್ತರವಿದ್ದು, ಟ್ರಾಲಿ 4 ಅಡಿ ಸೇರಿ ಒಟ್ಟು 17 ಅಡಿ ಎತ್ತರವಿತ್ತು. ಗಣೇಶ ಮೂರ್ತಿಯನ್ನು ಸಾಗಿಸುವಾಗ ಮಂಡಳದವರು ಹೆಸ್ಕಾಂನವರಿಗೆ ಮಾಹಿತಿ ನೀಡದೆ ಸಾಗಿಸುತ್ತಿದ್ದ ಕಾರಣಕ್ಕೆ ಅವಘಡ ಸಂಭವಿಸಿದೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಎಂದು ಹೆಸ್ಕಾಂ ಸಹಾಯಕ ಇಂಜಿನಿಯರ್ ಅರವಿಂದ ಗದಕರ ವಿಜಯವಾಣಿಗೆ ತಿಳಿಸಿದ್ದಾರೆ.

ಮಂಡಳದವರು ಹೆಸ್ಕಾಂನವರಿಗೆ ತಿಳಿಸದೇ ತಾವೆ ಕಟ್ಟಿಗೆ ಕೋಲಿನಿಂದ ವಿದ್ಯುತ್ ತಂತಿ ಮೇಲೆತ್ತಿ ಗಣೇಶ ಮೂರ್ತಿ ಸಾಗಿಸುತ್ತಿರುವುದರಿಂದ ಇಂತಹ ಅವಘಢ ಸಂಭವಿಸುತ್ತಿದೆ. ಬೆಳಗಾವಿಯ ಮಹಾಮಂಡಳದವರು ಮೊದಲೇ ಮಾಹಿತಿ ನೀಡುತ್ತಿದ್ದಾರೆ. ಹೀಗಾಗಿ ಮೂರ್ತಿ ಸಾಗಿಸುವಾಗ ಆ ಭಾಗದ ವಿದ್ಯುತ್ ಸಂಪರ್ಕ ತಪ್ಪಿಸಲಾಗುತ್ತಿದೆ. ಕಳೆದ 2 ದಿನಗಳಲ್ಲಿ ಇದಕ್ಕಿಂತ ಎತ್ತರದ ಮೂರ್ತಿಗಳನ್ನು ಸಾಗಿಸಲಾಗಿದ್ದು, ಮೊದಲೇ ಮಾಹಿತಿ ನೀಡಿದ್ದ ಕಾರಣ ಯಾವುದೇ ಸಮಸ್ಯೆ ಆಗಿಲ್ಲ ಎಂದು ಅರವಿಂದ ಗದಕರ ತಿಳಿಸಿದ್ದಾರೆ.

ಆದೇಶಕ್ಕೆ ಬೆಲೆ ಇಲ್ಲ: 2013ರ ಸೆಪ್ಟೆಂಬರ್18ರ ರಾತ್ರಿ ಬೆಳಗಾವಿಯ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ 28 ಅಡಿ ಎತ್ತರದ ಸಾರ್ವಜನಿಕ ಗಣೇಶ ಮೂರ್ತಿ ಸಾಗಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಮೃತಪಟ್ಟಿದ್ದರು. ಈ ಘಟನೆ ನಂತರ ಜಿಲ್ಲಾಡಳಿತ ಮತ್ತು ಪೊಲೀಸರು ಪ್ರತಿವರ್ಷ 10 ಅಡಿಗಿಂತ ಎತ್ತರದ ಗಣೇಶ ಮೂರ್ತಿ ಮಾಡದಂತೆ ಮನವೊಲಿಸಿ, ಜಾಗೃತಿ ಮೂಡಿಸುತ್ತಲೇ ಬಂದಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದ್ದರೂ, ಆದೇಶಕ್ಕೆ ಬೆಲೆ ದೊರಕುತ್ತಿಲ್ಲ.

ಹೆಸ್ಕಾಂಗೆ ಇರಲಿಲ್ಲ ಮಾಹಿತಿ

ಹೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರು ಈ ಘಟನೆ ಬಗ್ಗೆ ಟಿಳಕವಾಡಿ ಠಾಣೆಯ ಇನ್ಸ್‌ಪೆಕ್ಟರ್‌ಗೆ ಪತ್ರ ಬರೆದಿದ್ದು, ಬೆಳಗಾವಿಯ ಅನಗೋಳದ ಮೂರ್ತಿಕಾರ ಜೆ.ಜೆ.ಪಾಟೀಲ ಅವರು ನಿರ್ಮಿಸಿದ್ದ ಮೂರ್ತಿಯನ್ನು ಸದಲಗಾದ ಡ್ರಾಗನ್ ಬಾಯ್ಸ ಗಣೇಶ ಉತ್ಸವ ಮಂಡಳದವರು ಸಾಗಿಸುತ್ತಿರುವಾಗ ಕಟ್ಟಿಗೆ ಕೋಲಿನಿಂದ ಎಲ್.ಟಿ. ಲೈನ್ ಮೇಲೆತ್ತುವಾಗ ಒಂದಕ್ಕೊಂದು ತಂತಿ ತಗುಲಿ ಮೂರ್ತಿಗೆ ಹಾಕಿದ ಪ್ಲಾಸ್ಟಿಕ್‌ಗೆ ಬೆಂಕಿ ಹತ್ತಿಕೊಂಡಿದೆ. ಮೂರ್ತಿ ಸಾಗಾಟದ ಬಗ್ಗೆ ಮಂಡಳದವರು ಹೆಸ್ಕಾಂಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಮೂರ್ತಿ ಹಾಗೂ ಟ್ರಾಲಿಯ ಎತ್ತರದ ಸಹಿತ ಮಾಹಿತಿ ನೀಡಿ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...