More

    ಗಣೇಶ ವಿಸರ್ಜನೆ ಮಹೋತ್ಸವ ಅದ್ದೂರಿ

    ಕೆ.ಆರ್.ನಗರ: ಪಟ್ಟಣದ ಪುರಸಭೆ ಬಯಲು ರಂಗಮಂದಿರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ ವಿಸರ್ಜನಾ ಮಹೋತ್ಸವ ಮತ್ತು ಮೆರವಣಿಗೆ ಗುರುವಾರ ಅದ್ದೂರಿಯಾಗಿ ಜರುಗಿತು.

    ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಅಲಂಕೃತಗೊಂಡ ತೆರೆದ ವಾಹನದಲ್ಲಿ ಮಹಾ ಗಣಪತಿಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ನಂತರ ಹಳೆ ಎಡತೊರೆಯ ಅರ್ಕೇಶ್ವರಸ್ವಾಮಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು.

    ವಿವಿಧ ಸ್ಪರ್ಧೆ ಆಯೋಜನೆ: ಮಹಾ ಗಣಪತಿ ಸೇವಾ ಸಮಿತಿಯ 64ನೇ ವಾರ್ಷಿಕೋತ್ಸವದ ಅಂಗವಾಗಿ 10 ದಿನಗಳ ಕಾಲ ರಾಜ್ಯ ಮಟ್ಟದ ಪೌರಾಣಿಕ ನಾಟಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರ ಜತೆಗೆ ಸಾಮೂಹಿಕ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಾಸಕ ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಉಮಾಶ್ರೀ ಅವರು ಬುಧವಾರ ರಾತ್ರಿ ಆಯೋಜಿಸಿದ್ದ ಸಮಾರಂಭದಲ್ಲಿ ನಾಟಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

    ಎಂಎಲ್‌ಸಿ ಉಮಾಶ್ರೀ ಮಾತನಾಡಿ, ಪೌರಾಣಿಕ ನಾಟಕಗಳು ಮನುಷ್ಯನ ಬದುಕಿಗೆ ಹತ್ತಿರವಾಗಿದ್ದು, ಉತ್ತಮವಾದ ಜೀವನ ನಡೆಸಲು ಮಾರ್ಗದರ್ಶನ ಮಾಡಲಿವೆ. ಆದ್ದರಿಂದ ನಾಟಕ ಆಯೋಜನೆ ಮಾಡಿದ್ದಕ್ಕಾಗಿ ಸೇವಾ ಸಮಿತಿ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು, ಗಣಪತಿ ಸೇವಾ ಸಮಿತಿಗಳು ಚಿತ್ರನಟರು ಸೇರಿದಂತೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿವೆ. ಅದಕ್ಕಾಗಿ ಸಮಿತಿಗಳಿಗೆ ಆಭಾರಿಯಾಗಿದ್ದೇನೆ ಎಂದರು.
    ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಉಪಯುಕ್ತವಾದ ಕಾರ್ಯಕ್ರಮ ನೀಡುತ್ತಿರುವುದರ ಜತೆಗೆ ನುಡಿದಂತೆ ನಡೆಯುತ್ತಿದೆ. ಇದರಿಂದ ಮುಖ್ಯಮಂತ್ರಿಗಳು ಸೇರಿದಂತೆ ಸರ್ಕಾರ ದೇವರ ಕೃಪೆಯಿಂದ ಜನರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಇಲ್ಲಿನ ಶಾಸಕರು ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕೆಲಸ ಮಾಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು.

    ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ನವನಗರ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಮೂಳೆತಜ್ಞ ಡಾ.ಮೆಹಬೂಬ್‌ಖಾನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ್‌ಕುಮಾರ್, ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ತಮ್ಮನಾಯಕ, ಪದಾಧಿಕಾರಿಗಳಾದ ಕೆ.ಜಿ.ಸುಬ್ರಮಣ್ಯ, ಎಚ್.ಸಿ.ರಾಜು, ಎಸ್.ಯೋಗಾನಂದ್, ಜಿ.ರಮೇಶ್, ಪ್ರಕಾಶ್, ನಾಗರಾಜನಾಯಕ, ಆನಂದ್, ಜಾನಪದ ಪರಿಷತ್‌ನ ಪದಾಧಿಕಾರಿಗಳಾದ ಸೈಯದ್ ರಿಜ್ವಾನ್, ತಿಮ್ಮಶೆಟ್ಟಿ, ಕಾಂತರಾಜು ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts