More

    ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ, ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ; ಪ್ರಮೋದ್​ ಮುತಾಲಿಕ್​

    ವಿಜಯಪುರ: ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ಹೇಳಿದ್ದಾರೆ.

    ಬಾರ್, ಮಾಲ್​ಗಳನ್ನು ತೆರೆಯಲು ಅವಕಾಶ ಕೊಡ್ತಾರೆ, ಗಣಪತಿಗೆ ಏಕೆ ಅವಕಾಶ ಇಲ್ಲ? ನಾವು ಒಂದೇ ಒಂದು ಕರೊನಾ ವೈರಸ್ ಹರಡದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಗಣೇಶ ಚತುರ್ಥಿ ಆಚರಿಸುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

    ಇದನ್ನೂ ಓದಿರಿ ಜುಟ್ಟನಹಳ್ಳಿ ಮಾರಮ್ಮನ ಹುಂಡಿ ಹಣ ಕದ್ದ ಪೂಜಾರಿಯನ್ನು ಅಟ್ಟಾಡಿಸಿದ ಬಸವ, ದೇವರ ಹಣ ವಾಪಸ್​!

    ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ ಎನ್ನುವ ಮೂಲಕ ಸರ್ಕಾರದ ಆದೇಶಕ್ಕೆ ಸೆಡ್ಡುಹೊಡೆದ ಪ್ರಮೋದ್​ ಮುತಾಲಿಕ್​, ಕರೊನಾ ನಿರ್ವಹಣೆ ವಿಚಾರದಲ್ಲಿ ನೂರಕ್ಕೆ ನೂರರಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಾವು-ನೋವಿನಲ್ಲೂ ದುಡ್ಡು ಹೊಡೆಯಲಾಗುತ್ತಿದೆ. ವಿರೋಧ ಪಕ್ಷದವರು ಆರೋಪಿಸಿದ್ದು ಸರಿಯಾಗಿದೆ, ಸರ್ಕಾರ ಅವರಿಗೆ ಸಮರ್ಪಕ ದಾಖಲೆ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಕರೊನಾ ಸೋಂಕು ರಾಜ್ಯದಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹೆಚ್ಚು ಜನರು ಸೇರಿ ಯಾವುದೇ ಹಬ್ಬ ಆಚರಣೆ ಮಾಡುವುದು ಸರಿಯಲ್ಲ. ಅದ್ದೂರಿ ಗಣೇಶೋತ್ಸವ ಆಚರಣೆ ಬೇಡ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಕಳೆದ ತಿಂಗಳು ಹೇಳಿದ್ದರು. ಇದರ ಬೆನ್ನಲ್ಲೇ ಹಲವೆಡೆ ಅದ್ದೂರಿ ಗಣೇಶೋತ್ಸವಕ್ಕೆ ಬ್ರೇಕ್​ ಹಾಕಲಾಗಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಿ ಎಂದು ಕೆಲವೆಡೆ ಮನವಿ ಕೇಳಿಬಂದಿದೆ.

    ಅದ್ದೂರಿ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಬ್ರೇಕ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts