ಕಾಸರಗೋಡಿನಲ್ಲಿ ಭವ್ಯ ಶೋಭಾಯಾತ್ರೆ

ksd
Published on

ಕಾಸರಗೋಡು: ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾಸರಗೋಡು ವತಿಯಿಂದ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವಠಾರದಲ್ಲಿ ಐದು ದಿವಸಗಳ ಕಾಲ ನಡೆದ 69ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಬುಧವಾರ ರಾತ್ರಿ ಸಂಭ್ರಮದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು.

ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ಆರಂಭಗೊಂಡ ವಿಸರ್ಜನಾ ಮೆರವಣಿಗೆ ನಗರದ ವಿವಿಧೆಡೆ ಸಂಚರಿಸಿ ಶ್ರೀ ವೆಂಕಟ್ರಮಣ ದೇವಸ್ಥಾನ ಕೆರೆಯಲ್ಲಿ ಗಣಪತಿ ವಿಗ್ರಹ ವಿಸರ್ಜಿಸಲಾಯಿತು. ಆಕರ್ಷಕ ಸಿಂಗಾರಿ ಮೇಳ, ಹುಲಿ ಕುಣಿತ, ಚೆಂಡೆಮೇಳ, ಸ್ತಬ್ಧಚಿತ್ರ, ಭಜನಾ ತಂಡಗಳು ಮೆರವಣಿಗೆಗೆ ಮೆರಗು ನೀಡಿತು. ಐದು ದಿವಸಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net