ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಸಭೆ

bmr (1)
Published on

ಬ್ರಹ್ಮಾವರ: ಗಣೇಶ ಚತುರ್ಥಿ ಅಂಗವಾಗಿ ನಡೆಯುವ ಸಾರ್ವಜನಿಕ ಶ್ರೀ ಗಣೆೇಶೋತ್ಸವ ಪ್ರಯುಕ್ತ ಬ್ರಹ್ಮಾವರ ತಾಲೂಕು ಆಡಳಿತ ತಾಲೂಕಿನ ಹಲವಾರು ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಸಭೆ ಬುಧವಾರ ತಾಲೂಕು ಆಡಳಿತ ಸೌಧದಲ್ಲಿ ತಹಸೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ ಅಧ್ಯಕ್ಷತೆಯಲ್ಲಿ ಜರುಗಿತು.

ಸರ್ಕಾರದ ಸುತ್ತೋಲೆಯಂತೆ, ಉಡುಪಿ ಜಿಲ್ಲಾಧಿಕಾರಿಗಳು ನೀಡಿದ ಆದೇಶ ಮತ್ತು ನಿಯಮಗಳನ್ನು ಸಭೆಯಲ್ಲಿ ತಿಳಿಸಲಾಯಿತು. ಕಂದಾಯ ನಿರೀಕ್ಷಕ ರಾಜು, ಉಪತಹಸೀಲ್ದಾರ್, ಕೋಟ ಠಾಣಾಧಿಕಾರಿ ಸುಧಾ ಪ್ರಭು, ಉಡುಪಿ ಅಗ್ನಿಶಾಮಕ ದಳದ ಸಹಾಯಕ ಠಾಣಾಧಿಕಾರಿ ರವೀಂದ್ರ, ಪ್ರಮುಖ ಅಗ್ನಿಶಾಮಕ ಸತೀಶ್, ಶ್ರೀ ಗಣೆೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net