ಸುರೇಶ್ ದೇವಾಡಿಗ ಪುನರಾಯ್ಕೆ

suresh
ಸುರೇಶ್ ದೇವಾಡಿಗ
Published on

ಕಾರ್ಕಳ: ಬಸ್ ನಿಲ್ದಾಣದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 17ನೇ ವರ್ಷದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುರೇಶ್ ದೇವಾಡಿಗ ಮರುಆಯ್ಕೆಯಾಗಿದ್ದಾರೆ. ಶ್ರೀ ರಾಧಾಕೃಷ್ಣ ಸಭಾ ಭವನದಲ್ಲಿ ಸಮಿತಿ ಸ್ಥಾಪಕಾದ್ಯಕ್ಷ ಶುಭದರಾವ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಶೈಕ್ಷಣಿಕ ಮತ್ತು ವೈದ್ಯಕೀಯ ನೆರವು ನೀಡುವ ಕಾರ್ಯ ನಡೆಯಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net