ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲೇಜು ಸಿಬ್ಬಂದಿ ಸೇರಿ 3 ಮಂದಿ ಬಂಧನ| gang-rape-case

rapedf
Published on

ಪಶ್ವಿಮ ಬಂಗಾಳ: ಕೋಲ್ಕತ್ತಾದ ಕಸ್ಬಾದ ಕಾನೂನು ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಕ್ಯಾಂಪಸ್ ಆವರಣದೊಳಗೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಮಾಜಿ ವಿದ್ಯಾರ್ಥಿ ಮತ್ತು ಸಿಬ್ಬಂದಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಜೂನ್ 25 ರಂದು ಸಂಜೆ 7.30 ರಿಂದ ರಾತ್ರಿ 10.50 ರ ನಡುವೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕಸ್ಬಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಆರೋಪಿಗಳು 31 ವರ್ಷದ ಮೊನೊಜಿತ್ ಮಿಶ್ರಾ, 19 ವರ್ಷದ ಜೈಬ್ ಅಹ್ಮದ್ ಮತ್ತು 20 ವರ್ಷದ  ಪ್ರಮಿತ್ ಮುಖರ್ಜಿ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.

ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎನ್ನಲಾಗಿದೆ. ಹಳೆಯ ವಿದ್ಯಾರ್ಥಿಯೇ ಪ್ರಮುಖ ಆರೋಪಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.

ಬಲಿಪಶುವಿನ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದ್ದು, ಹಲವು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ.

ಜೂನ್ 26 ರ ಸಂಜೆ ಕೋಲ್ಕತ್ತಾದ ತಲ್ಬಗನ್ ಕ್ರಾಸಿಂಗ್ ಬಳಿಯ ಸಿದ್ಧಾರ್ಥ ಶಂಕರ್ ಶಿಶು ರಾಯ್ ಉದ್ಯಾನ್ ಎದುರು ಇಬ್ಬರು ಆರೋಪಿಗಳಾದ ಮಿಶ್ರಾ ಮತ್ತು ಅಹ್ಮದ್ ಅವರನ್ನು ಬಂಧಿಸಲಾಗಿದೆ. ಬಂಧನದ ಸಮಯದಲ್ಲಿ ಅವರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಇಂದು (27) ರಂದು ಬೆಳಗಿನ ಜಾವ 12.30 ರ ಸುಮಾರಿಗೆ ಮೂರನೇ ಆರೋಪಿ ಮುಖರ್ಜಿಯನ್ನು ಅವರ ನಿವಾಸದಿಂದ ಬಂಧಿಸಲಾಗಿದೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net