ಸಾಮೂಹಿಕ ಅತ್ಯಾಚಾರ ಪ್ರಕರಣ; ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬಾರದು ಎಂದ 'ಮಮತಾ ಬ್ಯಾನರ್ಜಿ'| Kolkata

Mamata Banerjee
Published on

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹುಡುಗಿಯರು ರಾತ್ರಿವೇಳೆ ಹೊರಗೆ (ಕಾಲೇಜಿನ) ಹೋಗದಂತೆ ನೋಡಿಕೊಳ್ಳಬೇಕು. ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಖಾಸಗಿ ವೈದ್ಯಕೀಯ ಕಾಲೇಜಿನ ಜವಾಬ್ದಾರಿಯಾಗಿರುವುದರಿಂದ ಸರ್ಕಾರವನ್ನು ಎಳೆದುತರುವುದು ಅನ್ಯಾಯ ಎಂದಿದ್ದಾರೆ. ಹುಡುಗಿಯರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ.ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಬಂಗಾಳ ಮುಖ್ಯಮಂತ್ರಿ ಹೇಳಿದ್ದಾರೆ.

ಏನಿದು ಘಟನೆ.?

ಅ.10 ರಂದು ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ಥೆ ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದು, ಒಡಿಶಾದ ಜಲೇಶ್ವರಿ ನಿವಾಸಿಯಾಗಿದ್ದಳು. ಆಕೆ ಸಂಜೆ ಕ್ಯಾಂಪಸ್​ನ ಹೊರಗೆ ತನ್ನ ಸ್ನೇಹಿತರೊಂದಿಗೆ ಊಟಕ್ಕೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿತ್ತು. ತಡರಾತ್ರಿ ಸುಮಾರು 8:30 ಸಮಯಕ್ಕೆ ವಿದ್ಯಾರ್ಥಿನಿ ತನ್ನ ಸಹಪಾಠಿಗಳೊಂದಿಗೆ ಕ್ಯಾಂಪಸ್​ನಿಂದ ಹೊರಗೆ ಊಟಕ್ಕೆ ಹೋಗಿದ್ದಾಳೆ. ಈ ಸಂದರ್ಭದಲ್ಲಿ ಕೆಲವು ಯುವಕರು ಆಕೆಯನ್ನು ತಡೆದಿದ್ದು, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಆಕೆಯ ಸ್ನೇಹಿತರು ಆರೋಪಿಸಿದ್ದಾರೆ.

ಪೋಷಕರ ದೂರು

(ಏಜೆನ್ಸೀಸ್​)

ವಿದ್ಯಾರ್ಥಿನಿಯ ಪಾಲಕರಿಗೆ ಈ ವಿಷಯ ತಿಳಿದ ಕೂಡಲೇ, ದುರ್ಗಾಪುರಕ್ಕೆ ತಲುಪಿದ್ದು, ಅತ್ಯಾಚಾರದ ಬಗ್ಗೆ ನ್ಯೂಟೌನ್​ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net