More

    ಸಂಘದಿಂದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ

    ಗಂಗಾವತಿ: ಶಿಕ್ಷಣ ಕ್ಷೇತ್ರದಲ್ಲಿ ಆರ್ಧ ಶತಮಾನದಿಂದಲೂ ಗಣನೀಯ ಸೇವೆ ಸಲ್ಲಿಸುತ್ತಿರುವ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದಿಂದ ಶೈಕ್ಷಣಿಕ ಸಂಸ್ಥೆಗಳನ್ನು ನಡೆಸಲಾಗುತ್ತಿದೆ ಎಂದು ಕಲ್ಲುಮಠದ ಡಾ.ಕೊಟ್ಟೂರು ಸ್ವಾಮೀಜಿ ಹೇಳಿದರು.

    ನಗರದ ಎಚ್.ಆರ್. ಸರೋಜಮ್ಮ ಬಾಲಕಿಯರ ಪಪೂ ಕಾಲೇಜು ಆವರಣದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದಿಂದ ಮಂಜೂರಾದ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಜನಪರ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉತ್ತೇಜನಕ್ಕೆ ಸಂಘ ಹಲವು ಉಪಯುಕ್ತ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಆರ್ಥಿಕ ಸಬಲೀಕರಣಕ್ಕೂ ಆದ್ಯತೆ ನೀಡಿದೆ ಎಂದರು.

    ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಸಾಂಸ್ಕೃತಿಕ ಭವನಕ್ಕೆ 25 ಲಕ್ಷ ರೂ. ಮಂಜೂರಾಗಿದ್ದು, ಕಾಲಮಿತಿಯೊಳಗೆ ಕಾಮಗಾರಿ ಮುಗಿದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

    ಸಂಘದ ನಿರ್ದೇಶಕ ಹಾಗೂ ಮಾಜಿ ಎಂಪಿ ಎಸ್.ಶಿವರಾಮಗೌಡ, ಕಾರ್ಯದರ್ಶಿ ಶರಣೇಗೌಡ ಮಾಲಿ ಪಾಟೀಲ್, ಉಪಾಧ್ಯಕ್ಷ ಕೆ.ಚನ್ನಬಸಯ್ಯಸ್ವಾಮಿ, ಸದಸ್ಯರಾದ ಗುಂಜಳ್ಳಿ ರಾಜಶೇಖರಪ್ಪ, ಎಚ್.ಎಂ.ಮಂಜುನಾಥ, ನಿವೃತ್ತ ಪ್ರಚಾರ್ಯ ಪ್ರೊ.ಬಿ.ಸಿ.ಐಗೋಳ, ಸಂಘದ ಜಿಲ್ಲಾ ಸಂಯೋಜಕ ಮಂಜುನಾಥ ಹೊಸ್ಕೇರಾ, ತಾಲೂಕು ಸಂಯೋಜಕ ವೀರೇಶ ಹಣವಾಳ್, ನಿರ್ಮಿತಿ ಕೇಂದ್ರ ಯೋಜನಾಧಿಕಾರಿ ಗಂಗಾಧರ ಶ್ರೇಷ್ಠಿ, ಕೆಸಿಎಸ್ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಶರಣಬಸಪ್ಪ ಕೋಲ್ಕಾರ್, ಪಿಯು ಕಾಲೇಜಿನ ಪ್ರಾಚಾರ್ಯ ಡಾ.ಎನ್.ರವಿ ಚವ್ಹಾಣ್, ಉಪ ಪ್ರಾಚಾರ್ಯ ಲಕ್ಷ್ಮೀಕಾಂತ ಹೇರೂರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts