More

    ಹೊಸ ಕೃಷಿ ತಿದ್ದುಪಡಿ ಕಾಯ್ದೆಯಿಂದ ಬದುಕು ಅತಂತ್ರ

    ಗಂಗಾವತಿ: ಹೊಸ ಕೃಷಿ ನೀತಿ ಜಾರಿ ಮೂಲಕ ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳಿಗೆ ಮಣೆ ಹಾಕಿದ್ದು, ರೈತ ಮತ್ತು ಕಾರ್ಮಿಕರ ಬದುಕು ಅತಂತ್ರವಾಗಲಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಹೇಳಿದರು.

    ರೈತ ವಿರೋಧಿ ಕಾಯ್ದೆಗಳ ವಾಪಸ್ ಪಡೆಯಲು ಒತ್ತಾಯಿಸಿ ಇಲ್ಲಿನ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಪ್ರಾಂತ ಕೃಷಿ ಕೂಲಿಕಾರರ ಸಂಘ, ಪ್ರಾಂತ ರೈತ ಸಂಘ ಮತ್ತು ಸಿಐಟಿಯು ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

    ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ನೀತಿಗಳು ಕಾರ್ಪೋರೇಟ್ ಕಂಪನಿಗಳ ಪರವಾಗಿದ್ದು, ಕೃಷಿಕರ ಹಿತಕ್ಕಲ್ಲ. ಅವನ್ನು ಹಿಂಪಡೆಯಲು ಒತ್ತಾಯಿಸಿ ದೆಹಲಿಯಲ್ಲಿ 2 ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ನೂತನ ನೀತಿಯಿಂದ ಕೃಷಿಕರು ಮತ್ತು ಕೂಲಿಕಾರರಿಗೆ ಆಗುವ ಅನ್ಯಾಯದ ಬಗ್ಗೆ ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಥಾ ಹಮ್ಮಿಕೊಂಡಿದ್ದು, ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಜಾಗೃತಿ ಜಾಥಾ ಸಂಚರಿಸಲಿದೆ ಎಂದರು.

    ಸಂಘದ ಜಿಲ್ಲಾಧ್ಯಕ್ಷ ಜಿ.ನಾಗರಾಜ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಎಸ್‌ಎ್ಐ ತಾಲೂಕಾಧ್ಯಕ್ಷ ಗ್ಯಾನೇಶ ಕಡಗದ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಹುಸೇನಪ್ಪ, ಎಂ.ಬಸವರಾಜ, ಮರಿನಾಗಪ್ಪ, ಮಂಜುನಾಥ ಡಗ್ಗಿ, ಭಾಗಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts