ಅನ್ನಭಾಗ್ಯ ಯೋಜನೆಯ ದುರ್ಬಳಕೆ ವಿರುದ್ಧ ಕ್ರಮಕ್ಕೆ ಆಗ್ರಹ

ಗಂಗಾವತಿ: ಅನ್ನಭಾಗ್ಯ ಯೋಜನೆಯ ಅಕ್ಕಿ ದುರ್ಬಳಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತಗೆ ಬುಧವಾರ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಸೈಯದ್ ಅಸ್ಲಂ ಮಾತನಾಡಿ, ಎಪಿಎಲ್, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ಗಳಿಗೆ ವಿತರಿಸುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಅನ್ಯರಾಜ್ಯಕ್ಕೆ ರವಾನೆಯಾಗುತ್ತಿದೆ. ಅರ್ಹರಿಗೆ ಅಕ್ಕಿ ತಲುಪದೆ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದ್ದು,ಕಡುಬಡವರು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ನ್ಯಾಯಬೆಲೆ ಅಂಗಡಿ ಮೂಲಕವೇ ಹೊರಗಡೆ ರವಾನಿಸಲಾಗುತ್ತಿದ್ದು, ಪ್ರಭಾವಿಗಳು ಮತ್ತು ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ನಿಯಂತ್ರಿಸದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದಾಗಿ ಎಚ್ಚರಿಸಿದರು. ತಾಲೂಕಾಧ್ಯಕ್ಷ ಇಮಾಮ್ ಹುಸೇನ್, ಉಪಾಧ್ಯಕ್ಷ ಮಹಾಂತೇಶ, ಪದಾಧಿಕಾರಿಗಳಾದ ಸೈಯ್ಯದ್ ಸಲ್ಮಾನ್, ಇರ್ಷಾದ್, ಶಫೀ, ಜಮೀರ್ ಇತರರಿದ್ದರು.

Leave a Reply

Your email address will not be published. Required fields are marked *