ಗಂಗಾವತಿ: ದುಶ್ಚಟಗಳಿಂದ ಭವಿಷ್ಯ ಹಾಳಾಗುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನೀಲಕಂಠಪ್ಪ ನಾಗಶೆಟ್ಟಿ ಹೇಳಿದರು.
ನಗರದ ವಿರುಪಾಪುರದ ಬೇತೆಲ್ ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ವಿಶ್ವ ತಂಬಾಕು ವಿರೋಧಿ ದಿನ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ತಂಬಾಕು ಪ್ರೇರಿತ ವಸ್ತುಗಳ ಬಳಕೆಯಿಂದ ಕುಟುಂಬ ಮತ್ತು ಸಮಾಜದ ಸ್ವಾಸ್ಥೃ ಹಾಳಾಗುತ್ತಿದ್ದು, ಜೀವನೋತ್ಸಾಹ ಕಳೆದುಕೊಳ್ಳಲಾಗುತ್ತಿದೆ. ಸ್ವಸ್ಥ ಸಮಾಜಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ದುಶ್ಚಟಗಳಿಂದ ದೂರವಿರುವಂತೆ ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿ ರಾಜೇಶ್ವರಿ ಮಾತನಾಡಿ, ಮಕ್ಕಳೇ ಭವ್ಯ ಭಾರತದ ಪ್ರಜೆಗಳಾಗಿದ್ದು, ಸದೃಢ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕೆಂದರು. ತಂಬಾಕು ಪ್ರೇರಿತ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಮಾತನಾಡಿದರು.
ಸಂಸ್ಥೆ ತಾಲೂಕು ಯೋಜನಾಧಿಕಾರಿ ಶಾಂತಾನಾಯ್ಕ, ಕೃಷಿ ಮೇಲ್ವಿಚಾರಕ ಡಿ.ಟಿ.ಲೋಕೇಶ, ಮೇಲ್ವಿಚಾರಕಿ ಜಯಲಕ್ಷ್ಮೀ, ಸೇವಾಪ್ರತಿನಿಧಿ ಬಸವ ಜ್ಯೋತಿ, ಶಾಲಾಡಳಿತ ಮಂಡಳಿ ನಿರ್ದೇಶಕಿ ಸುಜಾತಾ ರಾಜು, ಪಿಯು ಕಾಲೇಜು ಪ್ರಾಚಾರ್ಯ ವೆಂಕಟೇಶ ಬಿಂಗಿ, ಶಿಕ್ಷಕರಾದ ಮನೋಜಸ್ವಾಮಿ ನವಲಿ ಹಿರೇಮಠ, ಭೋಗೇಶ್ವರರಾವ್ ಇತರರಿದ್ದರು.