ಕಾರ್ಯಕರ್ತರ ಶ್ರಮ ಪಕ್ಷ ಮರೆಯಲ್ಲ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ

condolences to the family
ಇತ್ತೀಚಿಗೆ ನಿಧನರಾದ ಬಿಜೆಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ನರಸಿಂಗರಾವ್ ಕುಲ್ಕರ್ಣಿ ಅವರ ಗಂಗಾವತಿ ಜಯನಗರದ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾನುವಾರ ರಾತ್ರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಸಚಿವ ಬಿ.ಶ್ರೀರಾಮುಲು, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಂಸದ ಎಸ್.ಶಿವರಾಮನಗೌಡ ಇತರರಿದ್ದರು.
Published on

ಗಂಗಾವತಿ: ಇತ್ತೀಚಿಗೆ ನಿಧನರಾದ ಬಿಜೆಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ನರಸಿಂಗರಾವ್ ಕುಲ್ಕರ್ಣಿ ಅವರ ಗಂಗಾವತಿ ಜಯನಗರದ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾನುವಾರ ರಾತ್ರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಬಿಜೆಪಿಯಲ್ಲಿ ಕಳೆದ 30ವರ್ಷಗಳಿಂದ ಸಕ್ರಿಯರಾಗಿದ್ದು, ಲಾಪೇಕ್ಷೆಯಿಲ್ಲದೇ ದುಡಿದಿದ್ದರು. ನಿಧನದ ಸುದ್ದಿ ತಿಳಿದ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ನಿವಾಸಕ್ಕೆ ಭೇಟಿ ನೀಡಿ, ಕುಟುಂಬ ಸದಸ್ಯರೊಂದಿಗೆ ಚರ್ಚಿಸಿದರಲ್ಲದೇ, ಸಾಂತ್ವನ ಹೇಳಿದರು.

ಪಕ್ಷದಿಂದ ನೆರವು ನೀಡುವಂತೆ ಸ್ಥಳೀಯ ಕಾರ್ಯಕರ್ತರು ಮನವಿ ಮಾಡಿದರು. ಪಕ್ಷ ಆಡಳಿತಕ್ಕೆ ಬರಲು ಕಾರ್ಯಕರ್ತರೇ ಕಾರಣವಾಗಿದ್ದು, ಅವರ ಶ್ರಮವನ್ನು ಪಕ್ಷ ಎಂದಿಗೂ ಮರೆಯಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಂಸದ ಎಸ್.ಶಿವರಾಮನಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ತಳ್ಳಿಕೇರಿ, ನಗರಸಭೆ ಸದಸ್ಯ ವಾಸುದೇವ ನವಲಿ, ಮುಖಂಡರಾದ ನವೀನ್ ಗುಳಗಣ್ಣನವರ್, ಮಹಾಲಿಂಗಪ್ಪ ಬನ್ನಿಕೊಪ್ಪ, ಅಕ್ಕಿ ಚಂದ್ರಶೇಖರ್, ಹಾಸ್ಯ ಭಾಷಣಕಾರ ಬಿ.ಪ್ರಾಣೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net