More

    ಮೃತರ ಕುಟುಂಬಗಳಿಗೆ ಪರಿಹಾರ ಕೊಡಿ; ಕಟ್ಟಡ, ಕಲ್ಲು ಕ್ವಾರಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ

    ಗಂಗಾವತಿ: ಕೋವಿಡ್‌ನಿಂದ ಮೃತಪಟ್ಟಿರುವ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಟ್ಟಡ ಮತ್ತು ಕಲ್ಲು ಕ್ವಾರಿ ಕಾರ್ಮಿಕರ ಸಂಘದ ಸದಸ್ಯರು ನಗರದ ಶ್ರೀಕೃಷ್ಣ ದೇವರಾಯ ವೃತ್ತದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

    ಕರೊನಾ ಮುಂಜಾಗ್ರತಾ ಕ್ರಮಗಳಿಂದ ಕಾರ್ಮಿಕರು ದುಡಿಮೆ ಕಳೆದುಕೊಂಡಿದ್ದಾರೆ. ಸರ್ಕಾರ ಘೋಷಿಸಿರುವ ಪರಿಹಾರ ಬಹುತೇಕ ಕಾರ್ಮಿಕರಿಗೆ ಸಿಕ್ಕಿಲ್ಲ. ಕೋವಿಡ್‌ನಿಂದ ಮೃತಪಟ್ಟಿರುವ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರ ಪರಿಹಾರವನ್ನೂ ಕೊಟ್ಟಿಲ್ಲ. ಪಡಿತರ, ಟೂಲ್ ಮತ್ತು ಸುರಕ್ಷಾ ಕಿಟ್‌ಗಳನ್ನು ವಿತರಿಸುವಲ್ಲಿ ಸರ್ಕಾರ ವಿಲವಾಗಿದೆ. ಮನೆ ನಿರ್ಮಾಣಕ್ಕೆ ಸಹಾಯಧನ, ಹೆರಿಗೆ ಭತ್ಯೆ, ಸಹಜ ಮರಣದ ಪರಿಹಾರ ಮೊತ್ತ ಹೆಚ್ಚಿಸಬೇಕು. ಬೋಗಸ್ ಕಾರ್ಡ್‌ಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸೇವಾಸಿಂಧುಗೆ ಪ್ರತ್ಯೇಕ ಸ್‌ಟಾವೇರ್ ಅಳವಡಿಸುವಂತೆ ಸಂಘದ ಜಿಲ್ಲಾ ಅಧ್ಯಕ್ಷ ಎ.ಹುಲುಗಪ್ಪ ಒತ್ತಾಯಿಸಿದರು.

    ಹೈದರಾಬಾದ್ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರ ಕಾರ್ಮಿಕರ ಸೇವಾ ಸಂಘ ಮತ್ತು ಎಐಟಿಯುಸಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪದಾಧಿಕಾರಿಗಳಾದ ಎ.ಎಲ್.ತಿಮ್ಮಣ್ಣ, ಹನುಮಂತಪ್ಪ ಐಹೊಳೆ, ಎನ್.ಮರಿಸ್ವಾಮಿ, ಎಸ್.ಕನಕರಾಯ, ಕಾಸೀಂಸಾಬ್, ಕೆ.ಗಂಗಮ್ಮ, ಎಂ.ಶೇಖಮ್ಮ, ಸೈಯದ್ ಜಿಲಾನಿ, ಮಹೆಬೂಬ್ ಸಾಬ್, ಹನುಮೇಶ ಕರೇಕುರಿ ಮತ್ತು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts