More

    ಕೋವಿಡ್ ಮುಂಜಾಗ್ರತಾ ಕ್ರಮಗಳ ಮೇಲ್ವಿಚಾರಣೆ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಎಚ್.ಎಂ.ಸಿದ್ರಾಮಯ್ಯಸ್ವಾಮಿ ಹೇಳಿಕೆ

    ಗಂಗಾವತಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ. ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕೋವಿಡ್ ಮುಂಜಾಗ್ರತಾ ಕ್ರಮಗಳ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಸಂಸ್ಥೆಯ ಜಿಲ್ಲಾ ಆಯುಕ್ತ ಎಚ್.ಎಂ.ಸಿದ್ರಾಮಯ್ಯಸ್ವಾಮಿ ಹೇಳಿದರು.

    ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಇಲಾಖೆಗೆ ಮಾಸ್ಕ್‌ಗಳನ್ನು ಹಸ್ತಾಂತರಿಸಿ ಮಾತನಾಡಿದರು. ಜಿಲ್ಲೆಯ 26ಸಾವಿರ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಸಂಘ ಶಿಾರಸು ಮಾಡಿರುವ ಮಾಸ್ಕ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಸ್ಯಾನಿಟೈಸರ್ ಬಳಕೆ ಮತ್ತು ವಿದ್ಯಾರ್ಥಿಗಳು ಪರಸ್ಪರ ಅಂತರ ಕಾಯ್ದುಕೊಳ್ಳುವ ಬಗ್ಗೆ ಮೇಲ್ವಿಚಾರಣೆ ನಡೆಸಲಾಗುವುದು. ಇದಕ್ಕಾಗಿ 80 ಶಿಕ್ಷಕರು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

    ಬಿಇಒ ಸೋಮಶೇಖರಗೌಡ ತಿಪ್ಪನಾಳ್ ಮಾತನಾಡಿ, ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲೂಕಿನ 33 ಕೇಂದ್ರಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನೆರವು ಪಡೆಯಲಾಗಿದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಆಯುಕ್ತ ಶರಣಪ್ಪ ಹಾದಿಮನಿ, ತರಬೇತುದಾರರಾದ ಸೈಯದ್ ಸಾಬ್ ಗುತ್ತಿ, ಹುಸೇನ್‌ಸಾಬ್ ಮಕಂದಾರ್, ಟಿ.ಜಗನ್ನಾಥ, ಎ.ಯರ‌್ರೆಣ್ಣ, ಕೆ.ಶಿವಪ್ರಸಾದ ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts