ಗಂಗಾವತಿ: ಅತಿವೃಷ್ಟಿ ಮತ್ತು ಅನಾವೃಷ್ಟಿ ಸಂದರ್ಭದಲ್ಲಿ ಎದುರಾಗುವ ಆಪತ್ತುಗಳನ್ನು ಸಾರ್ವಜನಿಕರು ಸಮರ್ಥವಾಗಿ ಎದುರಿಸಬೇಕಿದ್ದು, ಮುಂಜಾಗ್ರತೆ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಎನ್‌ಡಿಆರ್‌ಎ್ ಪಿಐ ಅಜಯ್ ಕುಮಾರ ಹೇಳಿದರು.
ತಾಲೂಕಿನ ಆನೆಗೊಂದಿಯ ಸ.ಪ್ರೌ.ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಕಲ್ಪಿತ ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಭವನೀಯ ವಿಪತ್ತು, ಪ್ರವಾಹ ಪರಿಸ್ಥಿತಿ ಎದುರಿಸುವ ನಿವಾಸಿಗಳಿಗೆ ವಿಪತ್ತು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಸಂಭವನೀಯ ಆಪತ್ತುಗಳನ್ನು ತಪ್ಪಿಸಲಾಗುತ್ತಿದೆ. ಜಿಲ್ಲೆಯ ನದಿ ಪಾತ್ರದ ಎಲ್ಲ ಶಾಲೆ, ಕಾಲೇಜುಗಳಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು, ನಿರ್ವಹಣೆ ಕುರಿತು ಕಲ್ಪಿತ ಪ್ರದರ್ಶನ ಮೂಲಕ ಮಾಹಿತಿ ನೀಡಲಾಗುತ್ತಿದೆ. ಅತಿ ಮತ್ತು ಅನಾವೃಷ್ಟಿ ಸಂದರ್ಭದಲ್ಲಿ ಎದೆಗುಂದದೆ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದರು.
ಪ್ರಕತಿ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಪ್ರಕತಿ ವಿಕೋಪದಿಂದಾಗುವ ಅನಾಹುತ, ಅನಿಲ ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ ಹಾಗೂ ಸಿಡಿಲು ಬಡಿತದಿಂದ ರಕ್ಷಣೆ, ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥ ಇನ್ನಿತರ ಅನಾಹುತಗಳಿಂದ ಸಾರ್ವಜನಿಕರು ಕೈಗೊಳ್ಳಬೇಕಿರುವ ಮುಂಜಾಗ್ರತೆ ಕ್ರಮಗಳ ಬಗ್ಗೆ ತಂಡದ ಸದಸ್ಯ ವಜ್ರಚೇತನ ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ, ಸದಸ್ಯರಾದ ಎಚ್. ಎಂ.ಮಲ್ಲಿಕಾರ್ಜುನಸ್ವಾಮಿ, ಸುಶೀಲಾಬಾಯಿ, ಪಿಡಿಒ ಬಸವರಾಜಗೌಡ, ಗ್ರೇಡ್2 ತಹಸೀಲ್ದಾರ್ ಮಹಾಂತಗೌಡ ಗೌಡರ್, ತಾಪಂ ಇಒ ಲಕ್ಷ್ಮೀದೇವಿ ಯಾದವ್, ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಉಮಾದೇವಿ ಪಾಟೀಲ್, ಆರ್‌ಐ ಬಶೀರುದ್ದೀನ್, ಮುಖ್ಯಶಿಕ್ಷಕ ವಿಜಯಕುಮಾರ್, ಎನ್‌ಡಿಆರ್‌ಎ್ ತಂಡದ ಸದಸ್ಯರಾದ ಗಂಗಾಧರ ಚಿಕ್ಕೋಡಿ, ಕರುಣಾಮೂರ್ತಿ, ಶಶಿಕಾಂತ, ಗಂಗಾಧರ, ಶಂಕರಪ್ಪ, ತಾಲೂಕು ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ ಇತರರಿದ್ದರು.