More

    ಬೀದಿಬದಿ ವ್ಯಾಪಾರಿಗಳು ಶಿಫ್ಟ್; ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರ, ನಗರಸಭೆ ಸಿಬ್ಬಂದಿ ಕಾರ್ಯಾಚರಣೆ



    ಗಂಗಾವತಿ: ತರಕಾರಿ ವ್ಯಾಪಾರಿಗಳು ಮತ್ತು ಬೀದಿ ಬದಿಯ ತಳ್ಳು ಬಂಡಿಗಳನ್ನು ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆ ನಗರಸಭೆ ಆರಂಭಿಸಿದೆ.

    ನಗರದ ಗುಂಡಮ್ಮ ಕ್ಯಾಂಪ್‌ನಲ್ಲಿ ಸುಸಜ್ಜಿತ ಮಾರುಕಟ್ಟೆ ಪ್ರಾಂಗಣ ನಿರ್ಮಿಸಿದ್ದು, 20 ವರ್ಷವಾದರೂ ಆರಂಭವಾಗಿರಲಿಲ್ಲ. ಒಂದೇ ಕಡೆ ವಹಿವಾಟು ನಡೆಸುವ ಹಿನ್ನೆಲೆಯಲ್ಲಿ ನಗರದಲ್ಲಿರುವ ದಿನದ ಮಾರುಕಟ್ಟೆ ಮತ್ತು ರಸ್ತೆ ಬದಿಯ ತಳ್ಳು ಬಂಡಿಗಳನ್ನು ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದೆ. ನಾಲ್ಕು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದ ತರಕಾರಿ ಮಾರುಕಟ್ಟೆಯನ್ನು ತೆರವುಗೊಳಿಸಲಾಯಿತು. ಎಲ್ಲ ವಹಿವಾಟುದಾರರಿಗೆ ಮಾರುಕಟ್ಟೆ ಪ್ರಾಂಗಣಕ್ಕೆ ತೆರಳಲು ಸೂಚನೆ ನೀಡಲಾಗಿದೆ. ರಸ್ತೆಬದಿ ವಹಿವಾಟು ನಡೆಸುತ್ತಿದ್ದವರನ್ನೂ ಪ್ರಾಂಗಣಕ್ಕೆ ಸ್ಥಳಾಂತರಿಸಲಾಯಿತು.

    ದಿನದ ಮಾರುಕಟ್ಟೆ ತೆರವು ಸಂದರ್ಭದಲ್ಲಿ ಕೆಲ ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸ್ವಯಂ ಪ್ರೇರಣೆಯಿಂದ ತೆರವುಗೊಳಿಸಲು ಕಾಲಾವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಸಿಬಿಎಸ್ ವೃತ್ತದಿಂದ ಗಾಂಧಿ, ಜುಲಾಯಿನಗರ, ಗಣೇಶ ವೃತ್ತದಲ್ಲಿನ ಎಲ್ಲ ತಳ್ಳು ಬಂಡಿಗಳನ್ನು ಪ್ರಾಂಗಣಕ್ಕೆ ಸ್ಥಳಾಂತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts