17.8 C
Bengaluru
Wednesday, January 22, 2020

ಎಚ್‌ಐವಿ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮುಖ್ಯ – ಜಿಲ್ಲಾಧಿಕಾರಿ ಪಿ.ಸುನಿಲ್‌ಕುಮಾರ್ ಹೇಳಿಕೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಗಂಗಾವತಿ: ಎಚ್‌ಐವಿ ಪ್ರಕರಣ ನಿಯಂತ್ರಣಕ್ಕೆ ಜನರಲ್ಲಿ ಜಾಗೃತಿ ಮುಖ್ಯವಾಗಿದ್ದು, ಆಂದೋಲನ ಮೂಲಕ ನಿಯಂತ್ರಿಸಬೇಕಿದೆ ಎಂದು ಕೊಪ್ಪಳ ಡಿಸಿ ಪಿ.ಸುನಿಲ್‌ಕುಮಾರ್ ಹೇಳಿದರು.

ನಗರದ ಬಾಲಕರ ಸ.ಪ.ಪೂ.ಕಾಲೇಜು ಮೈದಾನದಲ್ಲಿ ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್, ಭಾರತೀಯ ವೈದ್ಯ ಸಂಘ, ರೋಟರಿ ಕ್ಲಬ್, ಉಪವಿಭಾಗ ಆಸ್ಪತ್ರೆ, ಏಡ್ಸ್ ಪ್ರಿವೆನ್ಶೆನ್ ಸೊಸೈಟಿ ಮತ್ತು ವಿವಿಧ ಕಾಲೇಜುಗಳ ಎನ್ನೆಸ್ಸೆಸ್ ಘಟಕದ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯ ಎಚ್‌ಐವಿ ಪ್ರಮಾಣ 0.06ರಷ್ಟಿದ್ದು, ರಾಜ್ಯಕ್ಕಿಂತ ಹೆಚ್ಚಾಗಿದೆ. ಎಚ್‌ಐವಿ ಸೋಂಕಿತ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಯಿದ್ದು, ಜಾಗೃತಿ ಮೂಲಕ ರೋಗ ಹರಡದಂತೆ ಎಚ್ಚರಿಕೆ ವಹಿಸಬೇಕಿದೆ. ತಪಾಸಣೆ ವಿಚಾರದಲ್ಲಿ ಯಾವುದೇ ಹಿಂಜರಿಕೆ ಬೇಡ. ರೋಗ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.

ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಹೊಸ್ಮನಿ ಮಾತನಾಡಿ, ಅಸುರಕ್ಷತೆ ಲೈಂಗಿಕ ಚಟುವಟಿಕೆಗಳಿಂದ ದೂರವಿರಬೇಕಿದ್ದು, ಸಿರಿಂಜ್, ಬ್ಲೇಡ್ ಬಳಸುವಾಗಲೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿದರು. ಶಾಸಕ ಪರಣ್ಣಮುನವಳ್ಳಿ ಮಾತನಾಡಿ, ರೋಗ ನಿಯಂತ್ರಣದಲ್ಲಿ ಜಾಗೃತಿ ಮುಖ್ಯವಾಗಿದ್ದು, ಏಡ್ಸ್ ಪ್ರಿವೆನ್ಶೆನ್ ಸೊಸೈಟಿ ಕಾರ್ಯಕರ್ತರು ರೋಗದ ಬಗ್ಗೆ ತಿಳಿವಳಿಕೆ ಮೂಡಿಸುವಂತೆ ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶೆ ಕುಲ್ಕರ್ಣಿ ರೇಣುಕಾ, ಜೆಎಂಎ್ಸಿ ಹಿರಿಯ ಶ್ರೇಣಿ ನ್ಯಾಯಧೀಶೆ ಜಿ.ಅನಿತಾ, ಪ್ರಧಾನ ಸಿವಿಲ್ ನ್ಯಾಯಾಧೀಶ ಆರ್.ಎಂ.ನದ್ಾ, ಹೆಚ್ಚುವರಿ ನ್ಯಾಯಾಧೀಶೆ ಎಚ್.ಡಿ.ಗಾಯತ್ರಿ, ಜಿಪಂ ಸದಸ್ಯೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ, ಡಿವೈಎಸ್‌ಪಿ ಬಿ.ಪಿ. ಚಂದ್ರಶೇಖರ್, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಪೊ.ಪಾಟೀಲ್, ಉಪಾಧ್ಯಕ್ಷೆ ಭೀಮಮ್ಮರಾಮನಗೌಡ, ಹಾಸ್ಯ ಭಾಷಣಕಾರ ಗಂಗಾವತಿ ಬಿ.ಪ್ರಾಣೇಶ, ಜಿಲ್ಲಾ ವೈದ್ಯಾಧಿಕಾರಿ ಡಾ.ಟಿ.ಲಿಂಗರಾಜ್, ಉಪವಿಭಾಗ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಈಶ್ವರ ಸವಡಿ, ತಾಲೂಕಾ ವೈದ್ಯಾಧಿಕಾರಿ ಡಾ. ಶರಣಪ್ಪ ಚಕೋತಿ, ಮುಖಂಡ ಎಚ್.ಎಂ.ತಿಪ್ಪೇರುದ್ರಸ್ವಾಮಿ ಇತರರಿದ್ದರು.

ಅದ್ದೂರಿ ಜಾಥಾ
ನಗರದ ಬಾಲಕರ ಸ.ಪ.ಪೂ.ಕಾಲೇಜು ಮೈದಾನದಿಂದ ಆರಂಭವಾದ ಜಾಗೃತಿ ಜಾಥಾದಲ್ಲಿ ಯಕ್ಷಗಾನ ಮೇಳ, ಹಗಲು ವೇಷಗಾರರು, ನಂದಿ ಕೋಲು ಕುಣಿತ, ವೀರಗಾಸೆ, ಡೊಳ್ಳು ಕುಣಿತ, ಕುದುರೆ ಕುಣಿತ, ಭಜನೆ ಮೇಳ ಸೇರಿ ವಿವಿಧ ಕಲಾ ತಂಡಗಳು ಪಾಲ್ಗೊಂಡಿದ್ದವು. ವಿವಿಧ ಕಾಲೇಜುಗಳ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...