More

    ಜನಪ್ರತಿನಿಧಿಗಳ ಮೆಚ್ಚಿಸಲು ಕೆಲಸ ಮಾಡಬೇಡಿ: ಗಂಗಾವತಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಸಚಿವ ಆನಂದಸಿಂಗ್ ಕಿವಿಮಾತು

    ಗಂಗಾವತಿ: ಜನಪ್ರತಿನಿಧಿಗಳು ಹಾಗೂ ಮೇಲಧಿಕಾರಿಗಳನ್ನು ಮೆಚ್ಚಿಸಲು ಕರ್ತವ್ಯ ನಿರ್ವಹಿಸಬೇಡಿ, ರೋಗಿಗಳ ಪರಿಸ್ಥಿತಿ ಅರಿತು ಪ್ರಾಮಾಣಿಕ ಸೇವೆ ಮಾಡಿ ಎಂದು ವೈದ್ಯರು, ಸಿಬ್ಬಂದಿಗೆ ಪ್ರವಾಸೋದ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಕಿವಿಮಾತು ಹೇಳಿದರು.

    ನಗರದ ಉಪವಿಭಾಗ ಆಸ್ಪತ್ರೆ ಆವರಣದಲ್ಲಿ ತಾಲೂಕು ಆಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಸೋಮವಾರ ಹಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು. ರೋಗಿಗಳೊಂದಿಗೆ ಸಂಯಮ, ಪ್ರೀತಿಯಿಂದ ಮಾತನಾಡಬೇಕು. ಆರೋಗ್ಯ ಸಂಬಂಧಿತ ಯೋಜನೆಗಳನ್ನು ಸಮರ್ಪಕ ಅನುಷ್ಠಾಗೊಳಿಸಬೇಕು. ಮೂರು ಬಾರಿ ಕಾಯಕಲ್ಪ ಪ್ರಶಸ್ತಿ ಲಭಿಸಿದೆ ಎಂಬ ಕಾರಣಕ್ಕೆ ನಿರ್ಲಕ್ಷ್ಯದಿಂದ ಕರ್ತವ್ಯ ನಿರ್ವಹಿಸಬಾರದು. ಪ್ರಶಸ್ತಿಗೆ ಒಬ್ಬರೇ ಕಾರಣರಲ್ಲ, ಸಿಬ್ಬಂದಿ ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯವಾಗಿದೆ. ಮತ್ತೊಮ್ಮೆ ಅನಿರೀಕ್ಷಿತ ಭೇಟಿ ನೀಡಿ ಆಸ್ಪತ್ರೆ ವ್ಯವಸ್ಥೆ ಪರಿಶೀಲಿಸುವೆ. ಖಾಸಗಿ ಆಸ್ಪತ್ರೆ ಮೀರಿಸುವಂತೆ ಬದಲಾದರೆ ಜನರ ವಿಶ್ವಾಸಗಳಿಸಲು ಸಾಧ್ಯ. ಜನಪ್ರತಿನಿಧಿಗಳ ಹೊಗಳಿಕೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಿಗ್ಗುವುದು ಬೇಡ ಎಂದು ತಿಳಿಸಿದರು.

    ಶಾಸಕ ಪರಣ್ಣ ಮುನವಳ್ಳಿ, ಸಂಸದ ಸಂಗಣ್ಣ ಕರಡಿ ಮಾತನಾಡಿದರು. ಆಡಳಿತಾಧಿಕಾರಿ ಹಾಗೂ ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಾ ಅಧಿಕಾರಿ ಡಾ.ಈಶ್ವರ ಸವಡಿ ಮಾತನಾಡಿದರು. ಮೂರನೇ ಬಾರಿ ಕಾಯಕಲ್ಪ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಚಿವ ಆನಂದ ಸಿಂಗ್ ವೈಯಕ್ತಿಕವಾಗಿ 5 ಲಕ್ಷ ರೂ. ಪ್ರೋತ್ಸಾಹಧನ ೋಷಿಸಿದರು. ಕಾಡಾ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರ ಸ್ವಾಮಿ, ನಯೋಪ್ರಾ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ನಗರಸಭೆ ಸದಸ್ಯ ವಾಸುದೇವ ನವಲಿ, ಡಿಸಿ ವಿಕಾಸ್ ಕಿಶೋರ್, ಜಿಪಂ ಸಿಇಒ ೌಜಿಯಾ ತರನ್ನುಮ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts