More

    ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಎಸ್‌ಎಫ್‌ಐ ಪ್ರತಿಭಟನೆ

    ಗಂಗಾವತಿ: ವೃತ್ತಿ ಪರ ಕೋರ್ಸ್‌ಗಳ ಅಧ್ಯಯನ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸುವಂತೆ ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ತಾಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

    ತಾಲೂಕು ಸಮಿತಿ ಅಧ್ಯಕ್ಷ ಗ್ಯಾನೇಶ ಕಡಗದ್ ಮಾತನಾಡಿ, ವೃತ್ತಿಪರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಲ್ಲಿ ಪ್ರೋತ್ಸಾಹ ಧನ ವಿತರಣೆಗಾಗಿ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದೆ. ಬಜೆಟ್ ಕೊರತೆ ನೆಪದಲ್ಲಿ ಮೆರಿಟ್ ಆಧಾರದಡಿ ಪ್ರೋತ್ಸಾಹ ಧನ ವಿತರಿಸುತ್ತಿರುವುದು ಸರಿಯಲ್ಲ. ವೃತ್ತಿಪರ ಕೋರ್ಸ್‌ಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಬಹುತೇಕವಾಗಿ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಕಳೆದ ವರ್ಷ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಗಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ರೋತ್ಸಾಹಧನ ವಿತರಿಸುವಂತೆ ಒತ್ತಾಯಿಸಿದರು. ತಾಪಂ ಇಒ ಡಿ.ಮೋಹನ್‌ಗೆ ಮನವಿ ಸಲ್ಲಿಸಿದರು. ಕಾರ್ಯದರ್ಶಿ ಶಿವಕುಮಾರ ಈಚನಾಳ್, ಸದಸ್ಯರಾದ ಸುಭಾನ್ ಸಾಬ್, ಗೌಸಿಯಾ ಬೇಗಂ, ಹುಸೇನ ಪೀರಾ, ಅಲ್ಲಾಭಕ್ಷಿ, ಅಫ್ಸಾನಾ, ರುಕ್ಸಾನಾ ಹಾಗೂ ವಿವಿಧ ಬಿ.ಎಡ್ ಕಾಲೇಜುಗಳ ವಿದ್ಯಾರ್ಥಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts