More

    ಪದ ಬಳಕೆಯಲ್ಲಿ ನಿಯಂತ್ರಣವಿರಲಿ; ಪತ್ರಕರ್ತರಿಗೆ ಶಾಸಕ ಪರಣ್ಣ ಮುನವಳ್ಳಿ ಸಲಹೆ

    ಪತ್ರಿಕಾ ದಿನಾಚರಣೆ ಆಯೋಜನೆ

    ಗಂಗಾವತಿ: ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಸುದ್ದಿಗಳ ಮೂಲಕ ಜನಪ್ರತಿನಿಧಿ ಮತ್ತು ಅಧಿಕಾರಿಗಳಿಗೆ ಸಲಹೆ ನೀಡಬೇಕು. ಆದರೆ, ಪದಗಳ ಬಳಕೆಯಲ್ಲಿ ನಿಯಂತ್ರಣವಿರಲಿ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

    ನಗರದ ತಾಪಂ ಸಭಾಂಗಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಶನಿವಾರ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ, ವನ ಮಹೋತ್ಸವ ಮತ್ತು ಮೇಲಂತಸ್ತಿನ ನವೀಕರಣ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಪರಿವರ್ತನೆಯಲ್ಲಿ ಪತ್ರಕರ್ತರ ಸೇವೆ ಅಮೂಲ್ಯವಾಗಿದೆ. ತಪ್ಪುಗಳು ಕಂಡುಬಂದಾಗ ನೇರವಾಗಿ ಹೇಳುವ ಸಾಮರ್ಥ್ಯ ರೂಢಿಸಿಕೊಳ್ಳಬೇಕು. ತೆಗಳುವಾಗ ನೋವಾಗುವಂತಹ ಪದಗಳನ್ನು ಬಳಸಬೇಡಿ ಎಂದು ಸಲಹೆ ನೀಡಿದರು.

    ಮಾಜಿ ಎಂಎಲ್ಸಿ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಆರ್.ಶ್ರೀನಾಥ ಮಾತನಾಡಿ, ಸಮಗ್ರ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಪ್ರಮುಖವಾಗಿದೆ. ಕರೊನಾ ಸಂದಿಗ್ಧತೆಯಲ್ಲಿ ಪತ್ರಕರ್ತರು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ ಎಂದರು. ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರನ್ನು ಗೌರವಿಸಲಾಯಿತು. ತಾಪಂ ಇಒ ಡಿ.ಮೋಹನ್, ಸಂಘದ ರಾಜ್ಯ ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ, ಸದಸ್ಯರಾದ ಜಿ.ಎಸ್.ಗೋನಾಳ್, ಎಚ್.ಎಸ್.ಹರೀಶ್, ಜಿಲ್ಲಾ ಅಧ್ಯಕ್ಷ ಎಂ.ಸಾದಿಕ್ ಅಲಿ, ಪ್ರಧಾನ ಕಾರ್ಯದರ್ಶಿ ಎನ್.ಎಂ.ದೊಡ್ಮನಿ, ತಾಲೂಕು ಅಧ್ಯಕ್ಷ ವಿಶ್ವನಾಥ ಬೆಳಗಲ್‌ಮಠ, ಪ್ರಧಾನ ಕಾರ್ಯದರ್ಶಿ ಹರೀಶ ಕುಲಕರ್ಣಿ ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts