21.7 C
Bengaluru
Tuesday, January 21, 2020

ಸಾಧಕಿಯರಿಗೆ ಪುರುಷರ ಸಹಕಾರ ಅಗತ್ಯ- ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ಅನಿಸಿಕೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಗಂಗಾವತಿ: ಮೌಲ್ಯ ಕಾಪಾಡುವ ಮಹಿಳೆಯರಿಗೆ ವಿವಿಧ ಕ್ಷೇತ್ರದ ಸಾಧನೆಗೆ ಎಲ್ಲ ರೀತಿಯ ಸಹಕಾರವನ್ನು ಪುರುಷ ಪ್ರಧಾನ ಸಮಾಜ ನೀಡಬೇಕು ಎಂದು ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ಹೇಳಿದರು.

ನಗರದ ಕಸಾಪ ಭವನದಲ್ಲಿ ಕಸಾಪ ತಾಲೂಕು ಘಟಕ, ಹಿರೇಜಂತಕಲ್‌ನ ಉಮಾಪ್ರಕಾಶನ ಭಾನುವಾರ ಆಯೋಜಿಸಿದ್ದ ಶಿಕ್ಷಕಿ ಶ್ರೀದೇವಿ ಕೃಷ್ಣಪ್ಪನವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುಸ್ತಕಗಳ ಮೂಲಕ ಪ್ರಸ್ತುತ ದಿನಮಾನಗಳ ವಾಸ್ತವಸ್ಥಿತಿ ಅನಾವರಣಗೊಳಿಸಿದ್ದು, ಮೌಢ್ಯತೆಯಿಂದ ತಂತ್ರಜ್ಞಾನದವರೆಗೂ ಮಾಹಿತಿ ನೀಡಲಾಗಿದೆ. ಮುಕ್ತ ವಾತಾವರಣವಿದ್ದಾಗ ಮಾತ್ರ ಸಾಧಿಸಲು ಸಾಧ್ಯ. ಮಹಿಳೆ ಬೆಳವಣಿಗೆ ಕುಟುಂಬದ ಪಾತ್ರ ಮುಖ್ಯ. ಪ್ರಬುದ್ಧತೆಯ ಸಾಹಿತ್ಯ ಬೆಳವಣಿಗೆಗೆ ಕಸಾಪ ಕಾರ್ಯಕ್ರಮ ಆಯೋಜಿಸುತ್ತಿರುವುದು ಪ್ರಶಂಸನೀಯ ಎಂದರು.

ಪುಸ್ತಕ ಬಿಡುಗಡೆಗೊಳಿಸಿದ ಕಸಾಪ ಮಾಜಿ ಅಧ್ಯಕ್ಷ ಸಿ.ಎಚ್.ನಾರಿನಾಳ್ ಮಾತನಾಡಿ, ಮಹಿಳೆಯರು ಬರೆಯುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಜತೆಗೆ ಬರೆಯಲು ಬೇರೆಯವರಿಗೆ ಪ್ರೇರಣೆಯಾಗಬೇಕಿದೆ. ಸಾಹಿತ್ಯಸಕ್ತಿ ಬೆಳೆಸಿಕೊಂಡಾಗ ಉತ್ತಮ ಕೃತಿ ಹೊರತರಲು ಸಾಧ್ಯ ಎಂದರು.

ಬೇಲಿಯೊಳಗಿನ ಬಟ್ಟೆ (ಕಥಾಸಂಕಲನ) ಕುರಿತು ಸಾಹಿತಿ ಲಿಂಗಾರೆಡ್ಡಿ ವೀ.ಆಲೂರು ಮತ್ತು ಕತ್ತಲಲ್ಲಿರುವವರ ಕೈ ದೀವಿಗೆ ಕುರಿತು ಸಾಹಿತಿ ಶರಣಬಸಪ್ಪ ಬಿಳಿಎಲೆ ಮಾತನಾಡಿದರು. ಬಸವ ಕಿರಣ ಮತ್ತು ದೀಕ್ಷಾ ನಾರಿನಾಳ್ ಸಂಗಡಿಗರಿಂದ ವಚನಗಾಯನ ಜರುಗಿತು. ಹಾಸ್ಯಭಾಷಣಕಾರ ಬಿ.ಪ್ರಾಣೇಶ, ಪುಸ್ತಕಗಳ ರಚನೆಗಾರ್ತಿ ಶ್ರೀದೇವಿ ಕೃಷ್ಣಪ್ಪ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಬಸವರೆಡ್ಡಿ ಆಡೂರು, ತಾಲೂಕಾಧ್ಯಕ್ಷ ಎಸ್.ಬಿ.ಗೊಂಡಬಾಳ್, ಪ್ರಕಾಶನದ ಮುಖ್ಯಸ್ಥರಾದ ಉಮಾದೇವಿ, ಜಿ.ಶಿವಲಿಂಗಪ್ಪ, ಬಸಮ್ಮ ಶರಣಪ್ಪ ಅಚ್ಚಪ್ಪ, ಸಿದ್ದಮ್ಮ ಹನುಮಂತಪ್ಪ ಕಬ್ಬಿಣದ ಇತರರಿದ್ದರು. ಶಿಕ್ಷಕರಾದ ಶ್ರೀನಿವಾಸ ಅಂಗಡಿ ಮತ್ತು ವೀರಮಹೇಶ್ವರಿ ನಿರ್ವಹಿಸಿದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...