More

    ಬ್ರಿಜ್ ಭೂಷಣ ಚರಣಸಿಂಗ್ ಬಂಧನಕ್ಕೆ ಎಸ್‌ಎಫ್‌ಐ ಒತ್ತಾಯ

    ಗಂಗಾವತಿ: ಕ್ರೀಡಾಪಟುಗಳನ್ನು ಶೋಷಿಸುತ್ತಿರುವ ಕುಸ್ತಿ ೆಡರೇಷನ್ ಆ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ ಚರಣಸಿಂಗ್‌ರನ್ನು ಬಂಧಿಸುವಂತೆ ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ನಗರದ ತಾಲೂಕು ಆಡಳಿತ ಸೌಧದ ಮುಂದೆ ಗುರುವಾರ ವಿವಿಧ ಕಾಲೇಜು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿ, ಉಪ ತಹಸೀಲ್ದಾರ್ ಮಂಜುನಾಥ ನಂದನ್‌ಗೆ ಮನವಿ ಸಲ್ಲಿಸಿದರು.

    ಸಮಿತಿ ತಾಲೂಕು ಅಧ್ಯಕ್ಷ ಗ್ಯಾನೇಶ ಕಡಗದ್ ಮಾತನಾಡಿ, ಕುಸ್ತಿ ಕ್ರೀಡೆ ವೇಳೆ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂದು ಆರೋಪಿಸಿ ಮುಖ್ಯಸ್ಥ ಬ್ರಿಜ್ ಭೂಷಣ್ ಚರಣ್ ಸಿಂಗ್ ವಿರುದ್ಧ 7 ಮಹಿಳಾ ಕುಸ್ತಿಪಟುಗಳು ದೆಹಲಿಯ ಸೆಂಟ್ರಲ್ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಇದನ್ನೂ ಓದಿ: ಬ್ರಿಜ್​ ವಿರುದ್ಧ ಮುಂದುವರಿದ ಧರಣಿ: ಭಾರತೀಯ ಒಲಿಂಪಿಕ್​ ಅಸೋಸಿಯೇಷನ್ ಮುಂದೆ 4 ಬೇಡಿಕೆಯಿಟ್ಟ ಕುಸ್ತಿಪಟುಗಳು

    ವರ್ಷದ ಹಿಂದೆ ಶುರುವಾದ ಈ ಹೋರಾಟಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ, ಪ್ರಕರಣವೂ ದಾಖಲಾಗಿಲ್ಲ. ಅಲ್ಲಿನ ಸರ್ಕಾರ ಮತ್ತು ಆಡಳಿತ ಮಂಡಳಿ ಯಾವ ಕ್ರಮವನ್ನು ಕೈಗೊಂಡಿಲ್ಲ, ಬದಲಾಗಿ ಆಪಾದಿತನ ರಕ್ಷಣೆಗೆ ಮುಂದಾಗಿದೆ. ಕೂಡಲೇ ಅಪಾದಿತನ ಮೇಲೆ ಕಾನೂನಿನಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

    ಸಮಿತಿ ಉಪಾಧ್ಯಕ್ಷ ನಾಗರಾಜ, ಹನುಮಂತ, ವಿದ್ಯಾರ್ಥಿಗಳಾದ ರಾಜಾಭಕ್ಷಿ, ಭೀಮೇಶ, ಶಂಕರ, ಸಂತೋಷ, ಬಸವರಾಜ, ಸಮೀರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts